ಲಕ್ನೋ: ಉತ್ತರಪ್ರದೇಶದ ಭಾರತೀಯ ಜನತಾ ಪಕ್ಷದ ವಕ್ತಾರ ಡಾ.ಮನೋಜ್ ಮಿಶ್ರಾ ಸೋಮವಾರ(ಮೇ 03) ಕೋವಿಡ್ ಸೋಂಕಿನಿಂದ ನಿಧನರಾಗಿರುವುದಾಗಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಇಂತಹ ಹಲವು ಸೋಲನ್ನು ನೋಡಿದ್ದೇನೆ: ಚುನಾವಣಾ ಸೋಲಿನ ಬಳಿಕ ಅಣ್ಣಾಮಲೈ ಪ್ರತಿಕ್ರಿಯೆ
ಮಿಶ್ರಾ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟ ನಂತರ ಅವರನ್ನು ಕಾನ್ಪುರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿರುವುದಾಗಿ ವರದಿ ತಿಳಿಸಿದೆ. ಮಿಶ್ರಾ ಅವರ ನಿಧನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ಹಿರಿಯ ವಕ್ತಾರ ಡಾ.ಮನೋಜ್ ಮಿಶ್ರಾ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸುವುದಾಗಿ ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಭಾರತದಲ್ಲಿ ಕೋವಿಡ್ ಸೋಂಕು ಪ್ರಕರಣ ಕ್ಷಿಪ್ರವಾಗಿ ಹರಡುತ್ತಿದ್ದು, ಕಳೆದ 24ಗಂಟೆಯಲ್ಲಿ 3,68,147 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,99,25,604ಕ್ಕೆ ಏರಿಕೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.