Advertisement

ಕೆ.ಆರ್‌.ಪೇಟೆ ತ್ರಿವೇಣಿ ಸಂಗಮ ಮಹಾಕುಂಭಮೇಳಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್‌

10:05 PM Sep 15, 2022 | Team Udayavani |

ಲಖನೌ: ಕರ್ನಾಟಕದ ಕೆ.ಆರ್‌.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆಗಮಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.

Advertisement

ಗುರುವಾರ ಲಖನೌದಲ್ಲಿ ಯೋಗಿ ಆದಿತ್ಯನಾಥ್‌ ಅವರನ್ನು ಖುದ್ದು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಅವರು, ಕೆ.ಆರ್‌.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಆಹ್ವಾನ ನೀಡಿದರು.

ಅಕ್ಟೋಬರ್‌ 13 ರಿಂದ 16ರವರೆಗೆ ಕೆ.ಆರ್‌. ಪೇಟೆಯ ಲಕ್ಷ್ಮಣತೀರ್ಥ-ಹೇಮಾವತಿ-ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದೆ. ಈ ಮಹಾಕುಂಭ ಮೇಳದಲ್ಲಿ ಅ.16 ರಂದು ಪಾಲ್ಗೊಳ್ಳುವುದಾಗಿ ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ ಎಂದು ನಾರಾಯಣಗೌಡ ಮಾಹಿತಿ ನೀಡಿದರು.

ವಿಶೇಷ ಆತಿಥ್ಯ: ತಮ್ಮನ್ನ ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಹಾಗೂ ನಿಯೋಗದ ಜೊತೆ ಮುಕ್ಕಾಲು ಗಂಟೆಗೂ ಅಧಿಕ ಕಾಲ ಯೋಗಿ ಆದಿತ್ಯನಾಥ್‌ ಅವರು ಮಾತುಕತೆ ನಡೆಸಿ, ವಿಶೇಷ ಆತಿಥ್ಯ ನೀಡಿದರು.

ಕರ್ನಾಟಕ ಹಾಗೂ ಉತ್ತರ ಪ್ರದೇಶಕ್ಕೂ ಗೋರಖನಾಥೇಶ್ವರನ ಸಂಬಂಧದ ಬಗ್ಗೆ ಯೋಗಿಜೀ ಮೆಲುಕು ಹಾಕಿದರು. ಪರಶುರಾಮ ಕಥೆ, ಕಾಲಬೈರವೇಶ್ವರನ ಕಥೆ, ಧರ್ಮಸ್ಥಳ ಮತ್ತು ಆದಿಚುಂಚನಗಿರಿಯ ಇತಿಹಾಸ ಹಾಗೂ ನಾಥ ಪರಂಪರೆಯ ಹಾಗೂ ಕರ್ನಾಟಕ ಸರ್ಕಾರ ಪ್ರಸ್ತುತ ಕೈಗೊಂಡಿರುವ ಅಭಿವೃದ್ದಿ ಕಾರ್ಯಗಳು ಸೇರಿದಂತೆ ಹಲವು ವಿಚಾರಗಳ ಕುರಿತು ಸುದೀರ್ಘ‌ವಾಗಿ ಮಾತುಕತೆ ನಡೆಸಿದರು.

Advertisement

ಇದೇ ಸಂದರ್ಭದಲ್ಲಿ ಕುವೆಂಪು ಅವರ ರಾಮಯಣ ದರ್ಶನಂ ಹಾಗೂ ಎಸ್‌ ಎಲ್‌ ಭೈರಪ್ಪನವರ ಪರ್ವ ಪುಸ್ತಕವನ್ನು ಯೋಗಿ ಆದಿತ್ಯನಾಥ್‌ ಅವರಿಗೆ ಸಚಿವರು ನೀಡಿದರು.

ಈ ಸಂದರ್ಭದಲ್ಲಿ ಕೆಪಿಎಸ್‌ಸಿ ಸದಸ್ಯ ಪ್ರಭುದೇವ್‌, ಸಚಿವ ಆಪ್ತ ಕಾರ್ಯದರ್ಶಿ ಪ್ರಭಾಕರ್‌ ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next