Advertisement
“ಸಿಎನ್‌ಎನ್-ನ್ಯೂಸ್18′ ಆಂಗ್ಲ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪ್ರತಿಯೊಂದು ದಿನವೂ ರಾಜ್ಯ ಸರ್ಕಾರಕ್ಕೆ ಪರೀಕ್ಷೆಯೇ ಆಗಿದೆ. ಹಿಂದಿನ ಅವಧಿಯಲ್ಲಿನ ನಮ್ಮ ಸಾಧನೆಯನ್ನು ಸುಧಾರಿಸಲು ಅವಕಾಶ ಸಿಗಲಿದೆ ಎಂದು ಹೇಳಿದ್ದಾರೆ.
Related Articles
ಮಣಿಪುರ ವಿಧಾನಸಭೆ ಚುನಾವಣೆಯ ಮೊದಲ ಹಂತ ಸೋಮವಾರ ಹಿಂಸಾಚಾರದಲ್ಲೇ ಕೊನೆಗೊಂಡಿದೆ. 38 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಶೇ.67.53ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಚುರಾಚಂದ್‌ಪುರ ಜಿಲ್ಲೆಯಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಭಾರೀ ಘರ್ಷಣೆ ನಡೆದಿದೆ. ಒಬ್ಬ ವ್ಯಕ್ತಿ ಗಾಯಗೊಂಡಿದ್ದರೆ, ಇವಿಎಂವೊಂದು ಹಾನಿಗೀಡಾಗಿದೆ. ಕಾಕ್ವಾದಲ್ಲಿ ಬಿಜೆಪಿ ಪೋಲಿಂಗ್ ಬೂತ್ ಅನ್ನು ಕಾಂಗ್ರೆಸ್ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಎನ್‌ಪಿಪಿ ಅಭ್ಯರ್ಥಿಯೊಬ್ಬರ ಕಾರಿನ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ.
Advertisement
ತಿಪಾಯಿಮುಖ್ ಕ್ಷೇತ್ರದ ಮತಗಟ್ಟೆಯಲ್ಲಿ ಕರ್ತವ್ಯಕ್ಕೆಂದು ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿ ನಾವೋರೆಮ್ ಇಬೋಚೌಬಾ ಅವರು ತಮ್ಮದೇ ರೈಫಲ್‌ನ “ಆಕಸ್ಮಿಕ ಫೈರಿಂಗ್’ನಿಂದಾಗಿ ಮೃತಪಟ್ಟಿದ್ದಾರೆ.