ಬುಲಂದ್‌ಶಹರ್ : ಯುಪಿಯ ಬುಲಂದ್‌ಶಹರ್ ಜಿಲ್ಲೆಯಲ್ಲಿ ಸ್ವಾಮೀಜಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ರನ್ನು ಭಾನುವಾರ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟ್ವಿಟರ್ ಪೋಸ್ಟ್ ಮೂಲಕ ಭಾನುವಾರ ಈ ವಿಷಯ ಬೆಳಕಿಗೆ ಬಂದಿದೆ ಎಂದು ಹಿರಿಯ ಪೊಲೀಸ್ ಅಧೀಕ್ಷಕ ಸಂತೋಷ್ ಕುಮಾರ್ ಸಿಂಗ್ ಹೇಳಿದ್ದಾರೆ, ನಂತರ ಸಿಕಂದರಾಬಾದ್ ಸರ್ಕಲ್ ಆಫೀಸರ್ (ಸಿಒ) ಅವರನ್ನು ಈ ವಿಷಯದ ಬಗ್ಗೆ ಪರಿಶೀಲಿಸುವಂತೆ ಕೇಳಲಾಗಿದೆ.
ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಎಸ್‌ಐ ಪವನ್ ಕುಮಾರ್ ತಪ್ಪಿತಸ್ಥ ಎಂದು ಕಂಡುಬಂದಿದೆ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ. ವಿನಾಕಾರಣ ಸ್ವಾಮೀಜಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಪವನ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾಕೋಡ್ ಪೊಲೀಸ್ ಠಾಣಾ ವ್ಯಾಪ್ತಿಯ ಕಮಲಾಪುರ ಗ್ರಾಮದ ದೇವಸ್ಥಾನದಲ್ಲಿ ವಾಸವಾಗಿರುವ ಶ್ರೀಗಳನ್ನು ಉಲ್ಲೇಖಿಸಿದ ಎಸ್‌ಎಸ್‌ಪಿ, ಕೆಲವು ದಿನಗಳ ಹಿಂದೆ ಸೈಕಲ್‌ನಲ್ಲಿ ಯಾವುದೋ ಸ್ಥಳಕ್ಕೆ ಹೋಗುತ್ತಿದ್ದಾಗ ಪೊಲೀಸರು ತಡೆಡಿದ್ದಾರೆ. ಪೊಲೀಸರು ಅವರ ಗುರುತಿನ ಚೀಟಿಯನ್ನು ಕೇಳಿದರು ಮತ್ತು ಅವರು ಅದನ್ನು ಒಯ್ಯುತ್ತಿಲ್ಲ ಎಂದಾಗ ಅವರನ್ನು ಹತ್ತಿರದ ಕಟ್ಟಡಕ್ಕೆ ಕರೆದೊಯ್ಯಲಾಯಿತು, ಅಲ್ಲಿ ಅವರ ಎಲ್ಲಾ ಬಟ್ಟೆಗಳನ್ನು ತೆಗೆದುಹಾಕಲಾಗಿತ್ತು ಎಂದು ತಿಳಿಸಿದರು.
ವಿವಸ್ತ್ರಗೊಳಿಸಿದ್ದಾರೆ ಎಂದು ಸ್ವಾಮೀಜಿ ಆರೋಪಿಸಿ ತನ್ನ ವಿಡಿಯೋ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ನ್ಯಾಯಕ್ಕಾಗಿ ಪೊಲೀಸ್ ಉನ್ನತಾಧಿಕಾರಿಗಳಿಗೆ ಮನವಿ ಮಾಡಿದ್ದರು.