Advertisement

Crime News: ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ; ವಿಷ ಸೇವಿಸಿ ಪ್ರಾಣ ಕಳೆದುಕೊಂಡ ದಂಪತಿ

09:48 AM Sep 24, 2023 | Team Udayavani |

ಲಕ್ನೋ: ಪತ್ನಿ ಮೇಲೆ ಸಾಮೂಹಿಕವಾಗಿ ದೈಹಿಕ ದೌರ್ಜನ್ಯ ನಡೆಸಿದ ಪರಿಣಾಮ ದಂಪತಿ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ಶನಿವಾರ(ಸೆ.24 ರಂದು) ಹೇಳಿದ್ದಾರೆ.

Advertisement

ಸೆಪ್ಟೆಂಬರ್ 20 ಮತ್ತು 21 ರ ಮಧ್ಯರಾತ್ರಿಯ ವೇಳೆ ಇಬ್ಬರು ವ್ಯಕ್ತಿಗಳು ಮಹಿಳೆ ಮೇಲೆ ಸಾಮೂಹಿಕವಾಗಿ ದೈಹಿಕವಾಗಿ ದೌರ್ಜನ್ಯವನ್ನುವೆಸಗಿದ್ದಾರೆ ಎಂದು ದಂಪತಿಯ ಸಂಬಂಧಿಕರು ಆರೋಪಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈ ಆಘಾತದಿಂದ ದಂಪತಿ ವಿಷ ಸೇವಿಸಿದ್ದಾರೆ. 30 ವರ್ಷದ ವ್ಯಕ್ತಿ ಮತ್ತು 27 ವರ್ಷದ ಪತ್ನಿ ವಿಷ ಸೇವಿಸಿದ್ದಾರೆ. ಇದರ ಪರಿಣಾಮ ಪತಿ ಅದೇ ದಿನ ಮೃತಪಟ್ಟಿದ್ದು, ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮತ್ತೊಂದು ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ.

ದಂಪತಿಗಳ ಪ್ರಾಣ ಕಳೆದುಕೊಳ್ಳುವ ಮುನ್ನ ಮೊಬೈಲ್‌ ನಲ್ಲಿ ವಿಡಿಯೋ ಮಾಡಿ ಆರೋಪಿಗಳ ಹೆಸರನ್ನು ಹೇಳಿದ್ದಾರೆ.

ಮೃತ ವ್ಯಕ್ತಿಯ ಸಹೋದರನ ದೂರಿನ ಆಧಾರದ ಮೇಲೆ ಶುಕ್ರವಾರ(ಸೆ.22 ರಂದು) ಇಬ್ಬರ ವಿರುದ್ಧ ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರ) ಮತ್ತು 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Advertisement

ಆರೋಪಿಗಳಾದ ಆದರ್ಶ್ (25) ಮತ್ತು ತ್ರಿಲೋಕಿ (45) ಅವರನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ದಂಪತಿಗೆ ಎಂಟು ಮತ್ತು ಆರು ವರ್ಷದ ಇಬ್ಬರು ಗಂಡು ಮಕ್ಕಳು ಮತ್ತು ಒಂದು ವರ್ಷದ ಮಗಳು ಇದ್ದಾಳೆ. ಮಕ್ಕಳು ಶಾಲೆಗೆ ಹೋಗುವ ಮುನ್ನ ನಾವು ವಿಷ ಸೇವಿಸಿದ್ದೇವೆ ನಾವು ಸಾಯುತ್ತೇವೆ ಎಂದು ಮಕ್ಕಳ ಬಳಿ ಪೋಷಕರು ಹೇಳಿರುವುದಾಗಿ ಪೊಲೀಸರು ಹೇಳಿದ್ದಾರೆ.

ಅತ್ಯಾಚಾರ ಘಟನೆಯು ಮೃತ ವ್ಯಕ್ತಿಯ ಜಮೀನು ಮಾರಾಟದ ವಿಚಾರವಾಗಿ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next