ಬರೇಲಿ: ಉತ್ತರ ಪ್ರದೇಶದ ರಾಮಪುರ ಜಿಲ್ಲೆಯ ಕೋರ್ಟ್ ಒಂದು ಮಾಜಿ ಸಂಸದೆ ಜಯಪ್ರದಾ ಅವರಿಗೆ ಬಂಧನದ ವಾರಂಟ್ ಹೊರಡಿಸಿದೆ.
2019ರ ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿ ಸಿದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಬೆಳವಣಿಗೆ ನಡೆದಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಮಂಗಳವಾರ ಈ ಬಗ್ಗೆ ಆದೇಶ ಹೊರಡಿಸಿದೆ.
ಜ. 9ರಂದು ಮುಂದಿನ ವಿಚಾರಣೆ ನಡೆಯಲಿದೆ ಎಂದು ಸರಕಾರಿ ವಕೀಲ ಅಮರನಾಥ್ ತಿವಾರಿ ಹೇಳಿದ್ದಾರೆ.
Related Articles
ಜಿಲ್ಲೆಯ ಎರಡು ಠಾಣೆಗಳ ವ್ಯಾಪ್ತಿಯಲ್ಲಿ 2019ರ ಎ. 18 ಮತ್ತು ಎ. 19ರಂದು ಕೇಸು ದಾಖಲಿಸಲಾಗಿತ್ತು. 2019ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು ಚುನಾವಣೆಯಲ್ಲಿ ಎಸ್‌ಪಿ ಮುಖಂಡ ಅಜಮ್ ಖಾನ್ ವಿರುದ್ಧ ಸೋಲು ಅನುಭವಿಸಿದ್ದರು.