Advertisement

ನಾವು ಅಧಿಕಾರಕ್ಕೆ ಬಂದ್ರೆ ಪ್ರತಿಭಟನೆಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಕ್ಕೆ 25 ಲಕ್ಷ:ಯಾದವ್

05:47 PM Nov 24, 2021 | Team Udayavani |

ಲಕ್ನೋ: ಒಂದು ವೇಳೆ 2022ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಾವನ್ನಪ್ಪಿರುವ ರೈತ ಕುಟುಂಬದ ಸದಸ್ಯರಿಗೆ 25 ಲಕ್ಷ ರೂಪಾಯಿ ನೀಡುವುದಾಗಿ ಸಮಾಜವಾದಿ ಪಕ್ಷದ ವರಿಷ್ಠ ಅಖಿಲೇಶ್ ಯಾದವ್ ಬುಧವಾರ(ನವೆಂಬರ್ 24) ಭರವಸೆ ನೀಡಿದ್ದಾರೆ.

Advertisement

ಬೇರೆಯವರಿಗಾಗಿ ಆಹಾರ ಧಾನ್ಯ ಬೆಳೆಯುವ ರೈತರ ಜೀವಕ್ಕೆ ಬೆಲೆಕಟ್ಟಲಾರದ್ದು ಎಂದು ಅಖಿಲೇಶ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. 2022ರಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಾವನ್ನಪ್ಪಿರುವ ರೈತ ಕುಟುಂಬದ ಸದಸ್ಯರಿಗೆ 25 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡುತ್ತಿರುವುದಾಗಿ ಹೇಳಿದರು.

ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ತಮ್ಮ ಬೆಂಬಲ ಇದೆ ಎಂದು ಅಖಿಲೇಶ್ ತಿಳಿಸಿದ್ದಾರೆ. 2022ರಲ್ಲಿ ಉತ್ತರಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಮುಂಬರುವ ವಿಧಾನಸಭೆ ಚುನಾವಣೆ ಆಡಳಿತಾರೂಢ ಬಿಜೆಪಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತಿದ್ದು, ವಿಪಕ್ಷಗಳಾದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಗೆ ಪ್ರತಿಷ್ಠೆಯ ಕಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next