ಲಕ್ನೋ:ಬಲವಂತದ ಕಾನೂನು ಬಾಹಿರ ಧಾರ್ಮಿಕ ಮತಾಂತರ ತಡೆ(ಲವ್ ಜಿಹಾದ್) ವಿರುದ್ಧದ ಸುಗ್ರೀವಾಜ್ಞೆಗೆ ಉತ್ತರಪ್ರದೇಶ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಅವರು ಶನಿವಾರ (ನವೆಂಬರ್ 28, 2020) ಅಂಕಿತ ಹಾಕಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಪ್ರದೇಶ ಸರ್ಕಾರದ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧದ ಸುಗ್ರೀವಾಜ್ಞೆ (2020)ಗೆ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು ಸಹಿ ಹಾಕಿರುವುದಾಗಿ ಅಧಿಕಾರಿಗಳು ವಿವರಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಬಲವಂತದ ಅಥವಾ ಕಾನೂನುಬಾಹಿರ ಧಾರ್ಮಿಕ ಮತಾಂತರ ತಡೆಯುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಕರಡನ್ನು ಸಿದ್ಧಪಡಿಸಿ, ಅನುಮತಿಗಾಗಿ ಕಾನೂನು ಸಚಿವಾಲಯಕ್ಕೆ ಕಳುಹಿಸಿತ್ತು.
ಒಂದು ವೇಳೆ ಕಾನೂನು ಉಲ್ಲಂಘಿಸಿ ಧಾರ್ಮಿಕ ಮತಾಂತರ ಘಟನೆಯಲ್ಲಿ ಆಪರಾಧಿ ಎಂದು ಸಾಬೀತಾದಲ್ಲಿ ಹತ್ತು ವರ್ಷಗಳವರೆಗೆ ಜೈಲುಶಿಕ್ಷೆ ವಿಧಿಸಲು ಅವಕಾಶ ಇದೆ ಎಂದು ವರದಿ ಹೇಳಿದೆ.
ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಧಾರ್ಮಿಕ ಮತಾಂತರ ತಡೆಗೆ ಕಾಯ್ದೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇತ್ತೀಚೆಗೆ ತಿಳಿಸಿದ್ದರು.