Advertisement

ದೀಪಾವಳಿ: ಪಟಾಕಿ ಮಾರಾಟ ಮತ್ತು ಬಳಕೆ ನಿಷೇಧಿಸಿದ ಉತ್ತರಪ್ರದೇಶ ಸರ್ಕಾರ

12:21 PM Oct 30, 2021 | Team Udayavani |

ಲಕ್ನೋ: ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರವು ಗಾಳಿಯ ಗುಣಮಟ್ಟ ಕಳಪೆ ದರ್ಜೆಯಲ್ಲಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್ ಸಿಆರ್) ಮತ್ತು ಇತರ ಪ್ರದೇಶಗಳಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿರುವುದಾಗಿ ತಿಳಿಸಿದೆ.

Advertisement

ಇದನ್ನೂ ಓದಿ:ಹಾನಗಲ್ ಉಪಚುನಾವಣೆ: ಮಂದಗತಿಯಲ್ಲಿ ಸಾಗುತ್ತಿದೆ ಮತದಾನ

ಉತ್ತರಪ್ರದೇಶದ ಗೃಹ ಇಲಾಖೆ ಹೊರಡಿಸಿರುವ ಆದೇಶದಲ್ಲಿ, ಗಾಳಿಯ ಗುಣಮಟ್ಟ ಉತ್ತಮಗೊಳಿಸುವ ನಿಟ್ಟಿನಲ್ಲಿ ಪಟಾಕಿ ಬಳಕೆ ನಿಷೇಧಿಸಲಾಗಿದೆ. ಆದರೆ ಪರಿಸರ ಸ್ನೇಹಿ ಹಾಗೂ ಹಸಿರು ಪಟಾಕಿಗಳನ್ನು ಬಳಸಲು ಅನುಮತಿ ನೀಡಿರುವುದಾಗಿ ಹೇಳಿದೆ.

ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವಿವರವಾದ ಮಾರ್ಗಸೂಚಿಯನ್ನು ಕಳುಹಿಸಿಕೊಡಲಾಗಿದೆ ಎಂದು ಹೆಚ್ಚುವರಿ ಮುಖ್ಯ ಗೃಹ ಕಾರ್ಯದರ್ಶಿ ಅವ್ನೀಶ್ ಕುಮಾರ್ ಅವಾಸ್ಥಿ ತಿಳಿಸಿದ್ದಾರೆ.

ಹಸಿರು ಪಟಾಕಿಗಳನ್ನು ಕೂಡಾ ಎರಡು ಗಂಟೆಗಳಿಗಿಂತ ಹೆಚ್ಚು ಕಾಲ ಸಿಡಿಸುವಂತಿಲ್ಲ. ಕ್ರಿಸ್ ಮಸ್ ಹಾಗೂ ಹೊಸ ವರ್ಷದ ಸಂದರ್ಭದಲ್ಲಿಯೂ 11-55ರ ರಾತ್ರಿಯಿಂದ 12.30ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ ಎಂದು ವಿವರಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next