Advertisement

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

12:48 AM Dec 26, 2024 | Team Udayavani |

ಗಾಜಿಯಾಬಾದ್‌: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ನಿಧನರಾದರೆಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದ ವ್ಯಕ್ತಿಯೊಬ್ಬನನ್ನು ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ಬುಧವಾರ ಬಂಧಿಸಲಾಗಿದೆ.

Advertisement

ಮಂಗಳವಾರ ವೈರಲ್‌ ಆಗಿದ್ದ “ಅಮಿತ್‌ ಶಾ ನಿಧನ’ದ ಪೋಸ್ಟನ್ನು ಫೇಸ್‌ಬುಕ್‌ನಲ್ಲಿ ಗಮನಿಸಿದ ಬಿಜೆಪಿ ನಾಯಕ ಅನಿಲ್‌ ಶರ್ಮಾ ಈ ಬಗ್ಗೆ ದೂರು ದಾಖಲಿಸಿದ್ದರು.

ಬಳಿಕ ರೋಹಿತ್‌ ಎಂಬಾತನನ್ನು ಬಂಧಿಸಲಾಗಿದೆ. ಫಾಲೋವರ್‌ ಹೆಚ್ಚಿಸಲು ಈ ಕೃತ್ಯವೆಸಗಿದ್ದನೆಂದು ವಿಚಾರಣೆ ವೇಳೆ ಗೊತ್ತಾಗಿದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next