ಲಕ್ನೋ: ಹಿಂದೂ ದೇವತೆಗಳ ಚಿತ್ರವಿರುವ ಕಾಗದದಲ್ಲಿ ಕೋಳಿ ಮಾಂಸವನ್ನು ಮಾರಾಟ ಮಾಡುವ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಉತ್ತರಪ್ರದೇಶದ ಸಂಭಾಲ್ ನಲ್ಲಿ ನಡೆದಿದೆ.
ಘಟನೆ ವಿವರ:
ತಾಲಿಬ್ ಹುಸೈನ್ ಎಂಬಾತ ತನ್ನ ಅಂಗಡಿಯಲ್ಲಿ ಕೋಳಿ ಮಾಂಸವನ್ನು ಹಿಂದೂ ದೇವರುಗಳ ಚಿತ್ರವಿರುವ ಪೇಪರ್ ನಲ್ಲಿ ಪ್ಯಾಕ್ ಮಾಡಿ ಕೊಡುತ್ತಿದ್ದು, ಇದರಿಂದ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆಯಾಗಿರುವುದಾಗಿ ಭಾನುವಾರ ಕೆಲವು ಹಿಂದೂ ಗ್ರಾಹಕರು ಆರೋಪಿಸಿರುವುದಾಗಿ ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ 24ಗಂಟೆಯಲ್ಲಿ 13,086 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ ಹೆಚ್ಚಳ
ಗ್ರಾಹಕರ ದೂರಿನ ಮೇರೆಗೆ ಪೊಲೀಸರು ಹುಸೈನ್ ಅಂಗಡಿಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಕೋಳಿ ಕತ್ತರಿಸುವ ಚೂರಿಯಿಂದ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿರುವುದಾಗಿ ವರದಿ ವಿವರಿಸಿದೆ.
ತಾಲಿಬ್ ಹುಸೈನ್ ವಿರುದ್ಧ ಭಾರತೀಯ ದಂಡ ಸಂಹಿತೆ 153ಎ, 295ಎ ಮತ್ತು 307 ಕಲಂನಡಿ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.