Advertisement

UP: 10 ವರ್ಷದ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ ತಂದೆ

01:10 PM Oct 12, 2024 | Team Udayavani |

ಉತ್ತರಪ್ರದೇಶ: ತಂದೆಯೊಬ್ಬ ತನ್ನ ಹತ್ತು ವರ್ಷದ ಮಗಳನ್ನು ಹಗ್ಗದಿಂದ ಬಿಗಿದು ತಲೆಕೆಳಗಾಗಿ ನೇತು ಹಾಕಿಸಿ ಮನಬಂದಂತೆ ಥಳಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಲಲಿತ್‌ಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

Advertisement

ಘಟನೆಗೆ ಸಂಬಂಧಿಸಿ ಥಳಿತಕ್ಕೊಳಗಾದ ಬಾಲಕಿಯ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿದ ಬಾರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ರಾಜಾ ದಿನೇಶ್ ಸಿಂಗ್, ತಂದೆಯೇ ತನ್ನ ಮಗಳನ್ನು ಹಗ್ಗದಿಂದ ಬಿಗಿದು ನೇತು ಹಾಕಿ ಮನಬಂದಂತೆ ಥಳಿಸಿದ್ದಾನೆ ಈ ಕುರಿತು ನೆರೆಮನೆಯವರು ನೀಡಿದ ದೂರಿನ ಮೇರೆಗೆ ಆರೋಪಿ ಗೋವಿಂದ್ ರೈ ರೈಕ್ವಾರ್ ನನ್ನು ಬಂಧಿಸಲಾಗಿದೆ, ವಿಚಾರಣೆ ನಡೆಸಿದ ವೇಳೆ ಆರೋಪಿ ತನ್ನ ಮಗಳು ನಾನು ಹೇಳಿದಂತೆ ಕೇಳುತ್ತಿಲ್ಲ, ನನ್ನ ಮಾತು ಕೇಳದಕ್ಕೆ ಸಿಟ್ಟಿಗೆದ್ದು ಆಕೆಯನ್ನು ಥಳಿಸಿರುವುದಾಗಿ ಹೇಳಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ತನ್ನ ಮಗಳಿಗೆ ಚಿತ್ರಹಿಂಸೆ ನೀಡುತ್ತಿರುವುದನ್ನು ಗಮನಿಸಿದ ನೆರೆಮನೆಯವರು ವಿಡಿಯೋ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ ಇದರ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಸತ್ಯಂಶ ಹೊರ ಬಿದ್ದಿದೆ.

 

Advertisement

Advertisement

Udayavani is now on Telegram. Click here to join our channel and stay updated with the latest news.

Next