Advertisement

ಚೀನಾದಿಂದ ಮರಳಿದ ಯುಪಿ ಮೂಲದ ವ್ಯಕ್ತಿಗೆ ಕೋವಿಡ್ ಪಾಸಿಟಿವ್

08:45 AM Dec 26, 2022 | Team Udayavani |

ಉತ್ತರ ಪ್ರದೇಶ: ಚೀನದಲ್ಲಿ ಕೋವಿಡ್‌ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೇ ಚೀನಾದಿಂದ ಮರಳಿದ ಯುಪಿ ಮೂಲದ ವ್ಯಕ್ತಿಗೆ ಕೋವಿಡ್‌ ಪಾಸಿಟಿವ್‌ ಕಾಣಿಸಿಕೊಂಡಿದೆ.

Advertisement

40 ವರ್ಷದ ವ್ಯಕ್ತಿ ಕಳೆದ ಎರಡು ದಿನಗಳ ಹಿಂದೆ ಚೀನಾದಿಂದ ಬಂದಿದ್ದರು. ಖಾಸಗಿ ಲ್ಯಾಬ್‌ ನಲ್ಲಿ ಕೋವಿಡ್‌ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್‌ ಕಾಣಿಸಿಕೊಂಡಿದೆ. ಸದ್ಯ ಪಾಸಿಟಿವ್‌ ಬಂದ ವ್ಯಕ್ತಿಯನ್ನು ಹೋಮ್ ಕ್ವಾರಂಟೈನ್ ನಲ್ಲಿರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಾಸಿಟಿವ್‌ ಕಾಣಿಸಿಕೊಂಡ ವ್ಯಕ್ತಿಯನ್ನು ಐಸೋಲೇಟ್‌ ಮಾಡಲಾಗಿದೆ. ನಮ್ಮ ತಂಡ ಅವರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು,ಕುಟುಂಬ ಸದಸ್ಯರ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳುತ್ತಿದೆ.  ಡಿ.23 ರಂದು ಖಾಸಗಿ ಪ್ರಯೋಗಾಲಯದಲ್ಲಿ ಪರೀಕ್ಷಿಸಿದ್ದಾರೆ. ಚೀನಾದಿಂದ ದೆಹಲಿ ಮೂಲಕ ಆಗ್ರಾಕ್ಕೆ ಮರಳಿದ್ದಾರೆ ಎಂದು ಮುಖ್ಯ ಆರೋಗ್ಯಾಧಿಕಾರಿ ಅರುಣ್ ಶ್ರೀವಾಸ್ತವ ಹೇಳಿದ್ದಾರೆ.

ನ.25 ರ ಬಳಿಕ ಜಿಲ್ಲೆಯಲ್ಲಿ ಕಾಣಿಸಿಕೊಂಡ ಮೊದಲ ಪಾಸಿಟಿವ್‌ ಪ್ರಕರಣ ಇದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next