Advertisement

ಸರ್ವಾಧಿಕಾರಿ ಧೋರಣೆಗೆ ಆಕ್ರೋಶ: ಉನ್ನಾವ್ ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ

01:42 PM May 13, 2021 | Team Udayavani |

ಲಕ್ನೋ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಉತ್ತರಪ್ರದೇಶದ ಉನ್ನಾವ್ ಜಿಲ್ಲೆಯ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ಉಸ್ತುವಾರಿ ವಹಿಸಿಕೊಂಡಿದ್ದ 16 ಮಂದಿ ಹಿರಿಯ ವೈದ್ಯರು ದಿಢೀರನೆ ರಾಜೀನಾಮೆ ನೀಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

Advertisement

ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳ ಅಸಭ್ಯ ವರ್ತನೆ ಮತ್ತು ಅಸಹಕಾರದ ಕಾರಣದಿಂದ ಬೇಸತ್ತು ರಾಜೀನಾಮೆ ನೀಡಿರುವುದಾಗಿ ಹಿರಿಯ ವೈದ್ಯರು ಆರೋಪಿಸಿದ್ದಾರೆ. ಸಮುದಾಯ ಆರೋಗ್ಯ ಕೇಂದ್ರದ 11 ವೈದ್ಯರು ಹಾಗೂ ಹಲವು ಪ್ರಾಥಮಿಕ ಆರೋಗ್ಯ ಕೇಂದ್ರದ ಐದು ವೈದ್ಯಾಧಿಕಾರಿಗಳು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ಉನ್ನಾವ್ ಮುಖ್ಯ ವೈದ್ಯಾಧಿಕಾರಿ ಡಾ.ಅಶುತೋಷ್ ಕುಮಾರ್ ತಿಳಿಸಿದ್ದಾರೆ.

ಕೋವಿಡ್ 19 ಸಾಂಕ್ರಾಮಿಕ ರೋಗದ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದರು ಕೂಡಾ ಜಿಲ್ಲಾಡಳಿತದ ಅಧಿಕಾರಿಗಳು ಸರ್ವಾಧಿಕಾರಿ ಧೋರಣೆ ಮತ್ತು ದಂಡನಾತ್ಮಕ ಆದೇಶಗಳನ್ನು ಹೊರಡಿಸಿರುವುದಾಗಿ ಡೆಪ್ಯುಟಿ ಸಿಎಂಒ ಡಾ.ತನ್ಮಯ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ವರದಿ ಹೇಳಿದೆ.

ವೈದ್ಯರ ಬಳಿ ಯಾವುದೇ ವಿವರಣೆ ಅಥವಾ ಚರ್ಚೆ ನಡೆಸದೇ ಏಕಾಏಕಿ ಜಿಲ್ಲಾಡಳಿತದ ಅಧಿಕಾರಿಗಳು ಕ್ರಮ ತೆಗೆದುಕೊಂಡಿರುವುದಾಗಿಯೂ ಹಿರಿಯ ವೈದ್ಯರು ದೂರಿದ್ದಾರೆ. ವೈದ್ಯರನ್ನು ಈ ರೀತಿ ನಡೆಸಿಕೊಂಡಿರುವುದು ಸಮಂಜಸವಲ್ಲ ಎಂದು ಗಂಜಾಮುರ್ದಾಬಾದ್ ಉಸ್ತುವಾರಿ ವೈದ್ಯಾಧಿಕಾರಿ ಡಾ.ಸಂಜೀವ್ ಕುಮಾರ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next