Advertisement

ಫ್ರಾನ್ಸ್ ಅಧ್ಯಕ್ಷರ ವಿರುದ್ಧ ಮುಸ್ಲಿಂ ದೇಶಗಳಲ್ಲಿ ಪ್ರತಿಭಟನೆ:ಉತ್ತರಪ್ರದೇಶದಲ್ಲಿ ಹೈಅಲರ್ಟ್

11:43 AM Nov 04, 2020 | Nagendra Trasi |

ಲಕ್ನೋ: ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಕ್ಯಾರಿಕೇಚರ್(ವ್ಯಂಗ್ಯಚಿತ್ರ) ಕುರಿತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ವಿರುದ್ಧ ಮುಸ್ಲಿಂ ದೇಶಗಳಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಏತನ್ಮಧ್ಯೆ ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೈಅಲರ್ಟ್ ಆಗಿರುವಂತೆ ಸರ್ಕಾರ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.

Advertisement

ವರದಿಯ ಪ್ರಕಾರ, ರಾಜ್ಯದಲ್ಲಿಯೂ ಫ್ರಾನ್ಸ್ ಅಧ್ಯಕ್ಷರ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸಲು ಧಾರ್ಮಿಕ ಮುಖಂಡರು ಮುಂದಾಗುವ ಸಾಧ್ಯತೆ ಇದ್ದಿದ್ದು, ಈ ಬಗ್ಗೆ ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ, ಎಸ್ ಟಿಎಫ್ ಮತ್ತು ಸ್ಥಳೀಯ ಗುಪ್ತಚರ ಇಲಾಖೆ ಕಣ್ಗಾವಲು ಇಡಬೇಕೆಂದು ಉತ್ತರ ಪ್ರದೇಶ ಸರ್ಕಾರ ನಿರ್ದೇಶನ ನೀಡಿರುವುದಾಗಿ ವರದಿ ಹೇಳಿದೆ.

ಇದನ್ನೂ ಓದಿ:ಆರೋಪಿಗಳ ಬಂಧನದ ವೇಳೆ ಪಿಎಸ್‌ಐಗೆ ಚೂರಿ ಇರಿತ! ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ನೇತೃತ್ವದ ಸರ್ಕಾರ, ಮುಖ್ಯವಾಗಿ ರಾಜ್ಯದ ಪಶ್ಚಿಮ ಭಾಗಗಳಲ್ಲಿ ಧಾರ್ಮಿಕ (ಮುಸ್ಲಿಂ) ಮುಖಂಡರು ಗುಂಪುಗೂಡದಂತೆ ಎಚ್ಚರ ವಹಿಸಬೇಕೆಂದು ತಿಳಿಸಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಯವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆಯ ಮಾಹಿತಿಯನ್ನು ಪಡೆದು ಕ್ರಮ ತೆಗೆದುಕೊಳ್ಳಬೇಕು ಎಂದು ಪೊಲೀಸ್ ಮಹಾನಿರ್ದೇಶಕರು ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next