ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ರಾಜಕೀಯ ಪಕ್ಷಗಳಲ್ಲಿ ಜಿದ್ದಾಜಿದ್ದಿನ ಪೈಪೋಟಿಗೆ ಸಾಕ್ಷಿಯಾಗಿದ್ದು, ವಿಧಾನಸಭಾ ಹಾಗೂ ಪ್ರಧಾನಿ ಕುರಿತು ಝೀ ನ್ಯೂಸ್ ನಡೆಸಿದ ಸಮೀಕ್ಷೆಯಲ್ಲಿ, 2024ರ ಸಾರ್ವತ್ರಿಕ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕೆಂದು ಶೇ.72ರಷ್ಟು ಜನರು ಒಲವು ವ್ಯಕ್ತಪಡಿಸಿರುವುದಾಗಿ ತಿಳಿಸಿದೆ.
ಇದನ್ನೂ ಓದಿ:ತನ್ನ ಸಹಚರನನ್ನು ಜೈಲಿನಿಂದ ಬಿಡಿಸಲು ಹೋಗಿ ತಾವೇ ಪೊಲೀಸರ ಖೆಡ್ಡಾಕ್ಕೆ ಬಿದ್ದರು
ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಹಾಗೂ ವಿದೇಶದಲ್ಲಿ ಜನಪ್ರಿಯತೆ ಗಳಿಸಿದ್ದು, ಮೂರನೇ ಬಾರಿಯೂ ಅವರು ಪ್ರಧಾನಿಯಾಗಿ ಆಯ್ಕೆಯಾಗಲಿ ಎಂಬುದು ಶೇ.72ರಷ್ಟು ಜನರ ಇಚ್ಛೆಯಾಗಿರುವುದು ಸಮೀಕ್ಷೆಯಿಂದ ತಿಳಿದು ಬಂದಿರುವುದಾಗಿ ವರದಿ ವಿವರಿಸಿದೆ.
ಉತ್ತರಪ್ರದೇಶದಲ್ಲಿಯೂ ವಿಧಾನಸಭಾ ಚುನಾವಣೆ ನಡೆಯಲಿದ್ದು, 2022ರಲ್ಲಿ ಯೋಗಿ ಆದಿತ್ಯನಾಥ್ ಮತ್ತೆ ಮುಖ್ಯಮಂತ್ರಿಯಾಗಲಿದೆ ಎಂದು ಮತದಾರರು ಒಲವು ವ್ಯಕ್ತಪಡಿಸಿರುವುದಾಗಿ ಸಮೀಕ್ಷೆ ತಿಳಿಸಿದೆ.
ಅಖಿಲೇಶ್ ಯಾದವ್ ಎರಡನೇ ಸ್ಥಾನದಲ್ಲಿದ್ದು, ಮಾಯಾವತಿ 3ನೇ ಸ್ಥಾನ ಪಡೆದಿದ್ದಾರೆ. ಅಲ್ಲದೇ ಉತ್ತರಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಮೈ ಲಡ್ಕಿ ಹೂಂ, ಲಡ್ ಸಕ್ತಿ ಹೂಂ ಪ್ರಚಾರಾಂದೋಲನ ಕೈಗೊಂಡಿದ್ದಾರೆ. ಕೇವಲ ಶೇ.4ರಿಂದ 5ರಷ್ಟು ಮಂದಿ ಮಾತ್ರ ಮುಖ್ಯಮಂತ್ರಿಯಾಗಲಿ ಎಂದು ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ವರದಿ ಹೇಳಿದೆ.
ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಲಿ ಎಂದು ಶೇ.67ರಷ್ಟು, ಅಖಿಲೇಶ್ ಯಾದವ್ ಗೆ ಶೇ.35, ಮಾಯಾವತಿ ಶೇ.9, ಪ್ರಿಯಾಂಕಾ ಗಾಂಧಿ ಶೇ.5ರಷ್ಟು ಮಂದಿ ಒಲವು ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.