Advertisement

ರಾಷ್ಟ್ರೀಯ ಪಕ್ಷದ ನಾಯಕರ ಮೇಲೆ ಉ.ಪ್ರ ಪೊಲೀಸರಿಂದ ದೌರ್ಜನ್ಯ: ಎಚ್.ಡಿ.ಕೆ ಆಕ್ರೋಶ

08:41 PM Oct 01, 2020 | Mithun PG |

ಬೆಂಗಳೂರು: ಅತ್ಯಾಚಾರ ಹಾಗೂ ಹತ್ಯೆಗೀಡಾದ ದಲಿತ ಬಾಲಕಿಯ ಪೋಷಕರಿಗೆ ಸಾಂತ್ವನ ಹೇಳಲು ಕಾಲ್ನಡಿಗೆಯಲ್ಲಿ ಹೊರಟಿದ್ದ ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಮೇಲೆ ಉತ್ತರ ಪ್ರದೇಶ ಪೊಲೀಸರು ನಡೆಸಿದ ದೌರ್ಜನ್ಯ ತೀವ್ರ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಅಹಿಂಸಾ ಪ್ರತಿಪಾದಕ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಜನ್ಮದಿನದ ಮುನ್ನ ಇಂದು ಉತ್ತರ ಪ್ರದೇಶ ಪೊಲೀಸರು ರಾಷ್ಟ್ರೀಯ ಪಕ್ಷದ ನಾಯಕರ ಮೇಲೆ ಅಮಾನವೀಯ ವರ್ತನೆ ತೋರಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಪ್ರತಿಭಟನಾ ಅಸ್ತ್ರವನ್ನು ಹಾಡುಹಗಲೇ ದಹಿಸುವ ಯತ್ನ ನಡೆಸಲಾಗಿದೆ ಎಂದು ಕಿಡಿಕಾರಿದ್ದಾರೆ.

ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ತರದ ರಾಜಕೀಯ ವಿರೋಧಿಗಳನ್ನು ಹಣಿಯಲು ಉತ್ತರ ಪ್ರದೇಶ ಪೊಲೀಸರು ಮುಂದಾಗಿದ್ದಾರೆ ಎಂದರೆ, ದಲಿತ ಬಾಲಕಿಯ ಪೋಷಕರನ್ನು ಹೊರಗಿಟ್ಟು ಆಕೆಯ ಶವವನ್ನು ಕತ್ತಲಲ್ಲಿ ಸುಟ್ಟಿದ್ದಾರೆ ಎಂಬುದರಲ್ಲಿ ನನಗೆ ಉತ್ಪ್ರೇಕ್ಷೆ ಕಾಣುತ್ತಿಲ್ಲ.

ಯಾವುದೇ ಸರಕಾರ ಶಾಂತಿಯುತ ಪ್ರತಿಭಟನೆಯನ್ನು ನಡೆಸುತ್ತಿದ್ದ ನಾಯಕರ ಕೊರಳಪಟ್ಟಿಗೆ ಕೈ ಹಾಕುತ್ತಾರೆ ಎಂದರೆ, ಉತ್ತರ ಪ್ರದೇಶ ಪೊಲೀಸರ ಹಿಂದೆ ಅಲ್ಲಿ ಅಧಿಕಾರ ಹಿಡಿದವರ “ನಿರ್ದೇಶನ” ಇಲ್ಲದಿರಲು ಸಾಧ್ಯವೇ? ಇಂತಹ ಧೋರಣೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೊಡಲಿ ಪೆಟ್ಟು ಕೊಟ್ಟಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next