ಲಕ್ನೋ: 2022ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಜಯಭೇರಿ ಗಳಿಸುವ ವಿಶ್ವಾಸ ಕಾಣಿಸಿಕೊಂಡಿರುವುದಾಗಿ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೊದಲ ಹಂತದ ಚುನಾವಣೆಯಲ್ಲಿಯೇ ರಾಜ್ಯದಲ್ಲಿ ಬಿಜೆಪಿ ಬಹುಮತ ಪಡೆಯುವ ನಿರೀಕ್ಷೆ ಮೂಡಿಸಿದೆ ಎಂದರು.
ಇದನ್ನೂ ಓದಿ:ಹೈಕೋರ್ಟ್ ಆಜ್ಞೆ ಪರಿಪೂರ್ಣವಾಗಿ ನಾವು ಜಾರಿ ಮಾಡಬೇಕು : ಸಿಎಂ
ಉತ್ತರಪ್ರದೇಶದಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿರುವ ಮೋದಿ ಅವರು ಶನಿವಾರ ಕನೌಜ್ ನಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ ಈ ಹೇಳಿಕೆ ನೀಡಿದ್ದಾರೆ. ಉತ್ತರಪ್ರದೇಶದ ಮೊದಲ ಹಂತದ ಚುನಾವಣೆ ಬಿಜೆಪಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರುವುದನ್ನು ಖಚಿತಪಡಿಸಿದೆ ಎಂದು ಹೇಳಿದರು.
ಚುನಾವಣೆಯಲ್ಲಿ ಮತದಾರರು ಯಾವುದೇ ಜಾತಿ ಮತ್ತು ಧರ್ಮವನ್ನು ನೋಡಿ ಮತ ಚಲಾಯಿಸಬೇಡಿ. ಆದರೆ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮತ ಚಲಾಯಿಸಿ ಎಂದು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.
ಉತ್ತರಪ್ರದೇಶದಲ್ಲಿ ಹಿಂದಿನ ಸಮಾಜವಾದಿ ಸರ್ಕಾರ ಆಡಳಿತದಲ್ಲಿದ್ದಾಗ ಉತ್ತರಪ್ರದೇಶದ ಜಿಲ್ಲೆಗಳು ಕ್ರಿಮಿನಲ್ಸ್ ಮತ್ತು ಮಾಫಿಯಾಗಳಿಂದ ನಲುಗಿತ್ತು. ಆದರೆ ಯೋಗಿ ಆದಿತ್ಯನಾಥ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಅಭಿವೃದ್ಧಿಯ ಪಥದತ್ತ ಸಾಗಿದೆ ಎಂದು ತಿಳಿಸಿದರು.