ಲಕ್ನೋ: ದೇಶೀ ನಿರ್ಮಿತ ಪಿಸ್ತೂಲ್ ಇಟ್ಟುಕೊಂಡು ಓಡಾಡುತ್ತಿದ್ದ ಶಿಕ್ಷಕಿಯನ್ನು ಬಂಧಿಸಿರುವ ಘಟನೆ ಮಂಗಳವಾರ (ಏಪ್ರಿಲ್ 12) ಉತ್ತರಪ್ರದೇಶದ ಮೈನ್ ಪುರಿಯಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಸಂತೋಷ್ ಆತ್ಮಹತ್ಯೆ ಪ್ರಕರಣ: ಉಡುಪಿಯಲ್ಲಿ ಸಚಿವ ಈಶ್ವರಪ್ಪ ವಿರುದ್ದ ಎಫ್ ಐಆರ್ ದಾಖಲು
ಶಿಕ್ಷಕಿಯನ್ನು ಫಿರೋಜಾಬಾದ್ ಶಾಲೆಯ ಕರೀಶ್ಮಾ ಸಿಂಗ್ ಯಾದವ್ ಎಂದು ಗುರುತಿಸಲಾಗಿದೆ. ಕೆಲಸದ ನಿಮಿತ್ತ ಆಕೆ ಮಂಗಳವಾರ ಮೈನ್ ಪುರಿಗೆ ತೆರಳಿದ್ದಳು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಗರದ ಕೋಟ್ವಾಲಿ ಪ್ರದೇಶದಲ್ಲಿ ಮಹಿಳೆಯೊಬ್ಬಳು ಪಿಸ್ತೂಲ್ ಹಿಡಿದು ಓಡಾಡುತ್ತಿರುವ ಬಗ್ಗೆ ಮಾಹಿತಿ ಬಂದಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ನಂತರ ಆಕೆಯನ್ನು ಪತ್ತೆಹಚ್ಚಿ ವಶಕ್ಕೆ ತೆಗೆದುಕೊಳ್ಳಲಾಗಿತ್ತು.
ನೀಲಿ ಬಣ್ಣದ ಜೀನ್ಸ್ ಧರಿಸಿದ್ದ ಯಾದವ್ ಬಳಿ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ವೊಬ್ಬರು ಆಕೆಯ ತಪಾಸಣೆ ನಡೆಸಿದಾಗ 315 ಬೋರ್ ದೇಶೀ ನಿರ್ಮಿತ ಪಿಸ್ತೂಲ್ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದಾಗಿ ವರದಿ ವಿವರಿಸಿದೆ.
ಶಿಕ್ಷಕಿಯನ್ನು ಬಂಧಿಸಿದ್ದು, ಭಾರತೀಯ ದಂಡ ಸಂಹಿತೆ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆಕೆ ಪಿಸ್ತೂಲ್ ಇಟ್ಟುಕೊಂಡು ತಿರುಗಾಡುತ್ತಿದ್ದ ಹಿಂದಿನ ಉದ್ದೇಶ ಏನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ತಿಳಿಸಿದ್ದಾರೆ.