Advertisement

Up: ಕ್ರಿಕೆಟ್‌ ಆಡಿ ನೀರು ಕುಡಿದ ಬಾಲಕ: ಕುಸಿದು ಬಿದ್ದು ಸಾವು; ಹೃದಯಾಘಾತ ಶಂಕೆ

01:29 PM Dec 31, 2023 | Team Udayavani |

ಲಕ್ನೋ: ಕ್ರಿಕೆಟ್‌ ಆಡಿ ನೀರು ಕುಡಿದ ಬಳಿಕ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಲ್ಮೋರಾ ಜಿಲ್ಲೆಯಲ್ಲಿ ನಡೆದಿದೆ.

Advertisement

ಶನಿವಾರ(ಡಿ.30 ರಂದು) ನಡೆದಿದ್ದು, ಹಸನ್‌ಪುರದ ಕಾಯಸ್ತಾನ್‌ನ 10ನೇ ತರಗತಿ ವಿದ್ಯಾರ್ಥಿ ಪ್ರಿನ್ಸ್ ಸೈನಿ ಎಂಬ ಬಾಲಕ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ.

ಬಾಲಕ ಸೈನಿ ಕ್ರಿಕೆಟ್‌ ಆಡಿದ ಬಳಿಕ ನೀರು ಕುಡಿಯಲು ಬಂದಿದ್ದಾನೆ. ಕೋಲ್ಡ್‌ ನೀರು ಕುಡಿದಿದ್ದಾನೆ. ನೀರು ಕುಡಿದ ತಕ್ಷಣವೇ ಆತ ಪ್ರಜ್ಞೆ ತಪ್ಪಿದ್ದಾನೆ.

ಪ್ರಿನ್ಸ್‌ ಅವರ ಸ್ನೇಹಿತರು ವಿಚಾರವನ್ನು ಮನೆಯವರಿಗೆ ತಿಳಿಸಿದ್ದು,ಬಾಲಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಪರೀಕ್ಷೆ ಮಾಡಿದ ವೈದ್ಯರು ಆದಾಗಲೇ ಆತ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಬಾಲಕನ ಸಾವಿಗೆ ಹೃದಯಾಘಾತವೇ ಕಾರಣವಿರಬಹದೆಂದು ಶಂಕಿಸಲಾಗಿದೆ. ಸದ್ಯ ಈ ಬಗ್ಗೆ ಪೋಷಕರು ದೂರು ದಾಖಲಿಸಿಲ್ಲ ಎಂದು ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next