Advertisement

ಯುಪಿ: ಬಾಲಕಿಯ ಗ್ಯಾಂಗ್ ರೇಪ್, ಬೆಂಕಿ ಹಚ್ಚಿ ಕೊಲ್ಲಲು ಯತ್ನ

10:37 PM Sep 11, 2022 | Team Udayavani |

ಪಿಲಿಭಿತ್ (ಯುಪಿ): ಬಾಲಕಿಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿದ್ದಾರೆ ಎಂದು  ಪೊಲೀಸರು ತಿಳಿಸಿದ್ದಾರೆ.

Advertisement

16 ವರ್ಷದ ಬಾಲಕಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಪ್ರಭು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆರೋಪಿಗಳು ಮೊದಲು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ ಮತ್ತು ನಂತರ ಡೀಸೆಲ್ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಾರೆ.

ಜಿಲ್ಲೆಯ ಮಾಧವ್ ತಾಂಡಾ ಪ್ರದೇಶದಲ್ಲಿ ಸೆಪ್ಟೆಂಬರ್ 7 ರಂದು ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಶನಿವಾರ ಸಂತ್ರಸ್ತೆ ತನಗಾದ ಸಂಕಷ್ಟವನ್ನು ವಿವರಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು ಬೆಳಕಿಗೆ ಬಂದಿದೆ.ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಬಾಲಕಿಯನ್ನು ಸೆ.7ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪ್ರಭು ಸುದ್ದಿಗಾರರಿಗೆ ತಿಳಿಸಿದರು.

ಬಾಲಕಿಯ ಕುಟುಂಬದವರ ದೂರಿನ ಮೇರೆಗೆ ಶನಿವಾರ ರಾತ್ರಿ ಇಬ್ಬರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ, ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

Advertisement

ಈ ಕುರಿತು ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದ್ದು, ಬಂಧಿತ ಆರೋಪಿಗಳಿಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಸದರ್) ಯೋಗೇಶ್ ಕುಮಾರ್ ಅವರು ಅಪ್ರಾಪ್ತ ವಯಸ್ಕ ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next