Advertisement

ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬೇಡಿಕೆ: ಪತಿಯ ಖಾಸಗಿ ಅಂಗವನ್ನೇ ಕಚ್ಚಿ ಗಾಯಗೊಳಿಸಿದ ಪತ್ನಿ.!

04:20 PM Jan 29, 2024 | Team Udayavani |

ಲಕ್ನೋ: ಪತ್ನಿಯೊಬ್ಬಳು ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬೇಡಿಕೆಯನ್ನಿಟ್ಟದ್ದಕ್ಕೆ ಸಿಟ್ಟಿನಲ್ಲಿ ಪತಿಯ ಖಾಸಗಿ ಅಂಗವನ್ನೇ ಕಚ್ಚಿ ಗಾಯಗೊಳಿಸಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.

Advertisement

ಘಟನೆಯ ನಂತರ 34 ವರ್ಷದ ಪತಿ ರಾಮು ನಿಶಾದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.

ಭಾನುವಾರ (ಜನವರಿ 28) ಪತಿ ರಾಮು ನಿಶಾದ್ ತನ್ನ ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಪತ್ನಿ ಒಪ್ಪದಿದ್ದಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದು ಜಗಳ ಉಂಟಾಗಿದೆ.

ಇದರಿಂದ ಕೋಪಗೊಂಡ ಪತ್ನಿ ಪತಿಯ ಖಾಸಗಿ ಅಂಗಕ್ಕೆ ಹಲ್ಲಿನಿಂದ ಕಚ್ಚಿ ಗಾಯಗೊಳಿಸಿದ್ದಾರೆ. ಖಾಸಗಿ ಅಂಗದಿಂದ ರಕ್ತ ಬಂದಿದ್ದು,ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಗಂಭೀರ ಪರಿಸ್ಥಿತಿಯಿಂದ ಅವರನ್ನು ಮತ್ತೊಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಅಸ್ವಾಭಾವಿಕ ಲೈಂಗಿಕತೆʼಗೆ ಪತಿ ಬೇಡಿಕೆ ಇಟ್ಟಿದ್ದಕ್ಕೆ ಬೇಸರಗೊಂಡಿರುವುದಾಗಿ ಪತ್ನಿ ಆರೋಪಿಸಿದ್ದಾರೆ.

Advertisement

ಪತ್ನಿ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 326 ರ ಅಡಿಯಲ್ಲಿ ಸ್ವಯಂಪ್ರೇರಣೆಯಿಂದ ತೀವ್ರವಾದ ಗಾಯವನ್ನು ಉಂಟುಮಾಡಿದ ಮತ್ತು ಕ್ರಿಮಿನಲ್ ಬೆದರಿಕೆಗಾಗಿ ಸೆಕ್ಷನ್ 506 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಸದ್ಯ ತನಿಖೆ ಆರಂಭಿಸಲಾಗಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಅನೂಪ್ ಸಿಂಗ್ ತಿಳಿಸಿದ್ದಾರೆ.

 

 

Advertisement

Udayavani is now on Telegram. Click here to join our channel and stay updated with the latest news.

Next