Advertisement

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

11:31 AM May 07, 2024 | Team Udayavani |

ಲಕ್ನೋ: ತನ್ನ ಪತಿಯ ದೇಹದ ಭಾಗಗಳನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ  ನಡೆದಿದೆ.

Advertisement

ಮೆಹರ್ ಜಹಾನ್ ಎಂಬ ಮಹಿಳೆಯನ್ನು ಆಕೆಯ ಪತಿ ನೀಡಿದ ದೂರಿನ ಮೇರೆಗೆ ಮೇ 5 ರಂದು ಸಿಯೋಹರಾ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಪತ್ನಿ ಜಹಾನ್‌ ತನಗೆ ಮಾದಕ ದ್ರವ್ಯವನ್ನು ನೀಡಿ, ಕೈ ಕಾಲನ್ನು ಹಗ್ಗದಿಂದ ಕಟ್ಟಿಹಾಕಿ ಸಿಗರೇಟ್‌ ನಿಂದ ಖಾಸಗಿ ಭಾಗಗಳನ್ನು ಸುಟ್ಟು ಚಿತ್ರ ಹಿಂಸೆ ನೀಡಿದ್ದಾಳೆಂದು ಪತಿ ಮನನ್ ಝೈದಿ ದೂರಿನಲ್ಲಿ ತಿಳಿಸಿದ್ದಾರೆ.

ಕೃತ್ಯದ ಬಗ್ಗೆ ಪತಿ ಮನೆಯೊಳಗಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರಿಗೆ ಒದಗಿಸಿದ್ದು, ಮೆಹರ್ ಜಹಾನ್ ತನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸುವುದು, ಅವನ ಕೈ ಮತ್ತು ಕಾಲುಗಳನ್ನು ಕಟ್ಟಿಹಾಕುವುದು ಮತ್ತು ಎದೆಯ ಮೇಲೆ ಕುಳಿತು ಕತ್ತು ಹಿಸುಕಲು ಪ್ರಯತ್ನಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪತಿಯ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯ ವಿರುದ್ಧ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ವರದಿ ದಾಖಲಿಸಿಕೊಂಡು ಬಂಧಿಸಲಾಗಿದೆ. ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಧರಂಪಾಲ್ ಸಿಂಗ್ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next