Advertisement

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ವರದಕ್ಷಿಣೆಗಾಗಿ ‘ತ್ರಿವಳಿ ತಲಾಖ್’

03:27 PM Jul 29, 2022 | Team Udayavani |

ಗೊಂಡಾ : ವರದಕ್ಷಿಣೆ ನೀಡಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬಳ ಮೇಲೆ ಆಕೆಯ ಪತಿ ಮತ್ತು ಆತನ ಸೋದರ ಸಂಬಂಧಿ ಅತ್ಯಾಚಾರವೆಸಗಿದ್ದು ಮತ್ತು ನಂತರ ‘ತ್ರಿವಳಿ ತಲಾಖ್’ ಮೂಲಕ ವಿಚ್ಛೇದನ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

Advertisement

ಲಕ್ನೋ ಮೂಲದ ಆರೋಪಿಯಾಗಿರುವ ಮಹಿಳೆಯ ಪತಿ ಮೊಹಮ್ಮದ್ ಅದ್ನಾನ್ ನನ್ನು ಗುರುವಾರ ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಆತನ ಸೋದರ ಸಂಬಂಧಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಮತ್ತು ನನಗೆ ಥಳಿಸುತ್ತಿದ್ದರು ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದು,ಹಿಂಸೆಯ ಕಾರಣ, ತವರು ಮನೆಯಲ್ಲಿ ವಾಸಿಸಲು ಪ್ರಾರಂಭಿಸಿದ್ದಳು ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಆಕಾಶ್ ತೋಮರ್ ಹೇಳಿದ್ದಾರೆ.

ಮಂಗಳವಾರ, ಅದ್ನಾನ್ ಮತ್ತು ಅವರ ಸೋದರಸಂಬಂಧಿ ತನ್ನ ಅತ್ತೆಯ ಮನೆಗೆ ಹೋಗಿದ್ದು, ಇಬ್ಬರೂ ಮಹಿಳೆಯನ್ನು ಒಬ್ಬಂಟಿಯಾಗಿ ಕಂಡು ಆಕೆಯ ಮೇಲೆ ಗ್ಯಾಂಗ್ ರೇಪ್ ಎಸಗಿದರು. ನಂತರ ಆಕೆಯನ್ನು ಥಳಿಸಿ, ಕಾನೂನುಬಾಹಿರವಾದ ‘ತ್ರಿವಳಿ ತಲಾಖ್’ ಮೂಲಕ ವಿಚ್ಛೇದನ ನೀಡಲಾಗಿದೆ ಎಂದುಎಂದು ತೋಮರ್ ಹೇಳಿದ್ದಾರೆ.

ತಲೆಮರೆಸಿಕೊಂಡಿರುವ ಸೋದರ ಸಂಬಂಧಿಯನ್ನು ಬಂಧಿಸಲು ಪ್ರಯತ್ನ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next