Advertisement

ಗೆಳತಿಯೊಂದಿಗೆ ಜೀವಿಸಲು ಲಿಂಗ ಬದಲಾವಣೆಗೆ ನಿರ್ಧರಿಸಿದ ಯುವತಿ!

10:25 AM Jun 28, 2022 | Team Udayavani |

ಲಕ್ನೋ: ತನ್ನ ಗರ್ಲ್ ಫ್ರೆಂಡ್‌ ಜೊತೆಗಿನ ಸಂಬಂಧಕ್ಕೆ ಮನೆಯವರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನ ಮಹಿಳೆಯೊಬ್ಬಳು ತನ್ನ ಲಿಂಗ ಬದಲಾವಣೆ ಮಾಡಿಕೊಂಡ ಘಟನೆ ನಡೆದಿದೆ.

Advertisement

ಸಲಿಂಗಕಾಮಿಗಳಾಗಿದ್ದ ಇಬ್ಬರು ಯುವತಿಯರು ಬದುಕಿನುದ್ದಕ್ಕೂ ಜತೆಗಿರಲು ಬಯಸಿದ್ದರು. ಆದರೆ, ಇದಕ್ಕೆ ಅವರ ಕುಟುಂಬಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಅವರ ಸಂಬಂಧವನ್ನು ಒಪ್ಪಿಕೊಳ್ಳಲು ಯಾರೂ ಸಿದ್ಧರಿರಲಿಲ್ಲ. ಹೀಗಾಗಿ, ಒಬ್ಬ ಯುವತಿಯು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಗಂಡಾಗಿ ಬದಲಾಗಲು ನಿರ್ಧರಿಸಿದ್ದಾಳೆ.

ನಮ್ಮ ಬದುಕಿನಲ್ಲಿ ಇನ್ಯಾರೂ ಮಧ್ಯಪ್ರವೇಶ ಮಾಡಬಾರದು, ನಮ್ಮ ಸಂಬಂಧಕ್ಕೆ ಯಾರೂ ಅಡ್ಡಿ ಉಂಟುಮಾಡಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಆಕೆ ಹೇಳಿದ್ದಾರೆ.

ಇದನ್ನೂ ಓದಿ:ನ್ಯೂಯಾರ್ಕ್‌ನಲ್ಲಿ ಶೂಟೌಟ್: ಭಾರತೀಯ ಮೂಲದ ವ್ಯಕ್ತಿಯ ಹತ್ಯೆ

ಪ್ರಯಾಗ್‌ರಾಜ್‌ನ ಸ್ವರೂಪ್‌ರಾಣಿ ನೆಹರೂ ಆಸ್ಪತ್ರೆಯ ವೈದ್ಯರ ತಂಡವು ಈ ಶಸ್ತ್ರಚಿಕಿತ್ಸೆ ನೆರವೇರಿಸಲಿದೆ. ಇಡೀ ಪ್ರಕ್ರಿಯೆ ಮುಗಿಯಲು ಇನ್ನೂ ಒಂದೂವರೆ ವರ್ಷ ಹಿಡಿಯಲಿದೆ. ಅದಾದ ಬಳಿಕ ಆಕೆ ಗಂಡಾಗಿ ಬದಲಾಗಲಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next