Advertisement

ಸಾಮೂಹಿಕ ಅತ್ಯಾಚಾರ ಎಸಗಿ, ನಾಲಗೆ ಕತ್ತರಿಸಿ ಚಿತ್ರಹಿಂಸೆ; ಯುವತಿ ಸಾವು

01:40 PM Sep 29, 2020 | Nagendra Trasi |

ನವದೆಹಲಿ:20 ವರ್ಷದ ಯುವತಿಯ ಮೇಲೆ ನಾಲ್ವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಲ್ಲದೆ, ಚಿತ್ರಹಿಂಸೆಗೆ ಒಳಗಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ (ಸೆಪ್ಟೆಂಬರ್ 29, 2020) ಸಾವನ್ನಪ್ಪಿದ್ದಾಳೆ. ಈ ಘಟನೆ ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ನಡೆದಿತ್ತು.

Advertisement

20 ವರ್ಷದ ಹತ್ರಾಸ್ ಗ್ರಾಮದ ಯುವತಿ ಮೇಲೆ ನಾಲ್ವರು ದುರುಳರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು. ಅಷ್ಟೇ ಅಲ್ಲ ಆಕೆಯ ನಾಲಗೆಯನ್ನು ಕತ್ತರಿಸಿ ಹಾಕಿ, ಚಿತ್ರಹಿಂಸೆ ನೀಡಿದ್ದರು. ತುಂಬಾ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಉತ್ತರಪ್ರದೇಶದ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಿದ್ದು, ನಂತರ ಆಕೆಯನ್ನು ದೆಹಲಿಗೆ ಸ್ಥಳಾಂತರಿಸಲಾಗಿತ್ತು.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಘಟನೆಗೆ ಸಂಬಂಧಿಸಿದ ನಾಲ್ವರು ಆರೋಪಿಗಳು ಈಗ ಜೈಲು ಕಂಬಿ ಎಣಿಸುತ್ತಿದ್ದಾರೆ. ಯುವತಿ ಹಿಂದುಳಿದ ಜಾತಿಗೆ ಸೇರಿದ್ದು, ಅತ್ಯಾಚಾರ ಎಸಗಿದ ಆರೋಪಿಗಳು ಮೇಲ್ವರ್ಗಕ್ಕೆ ಸೇರಿದವರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಪೈಶಾಚಿಕ ಅತ್ಯಾಚಾರ ಪ್ರಕರಣದ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ:ಮೆದುಳು ತಿನ್ನೋ ಸೂಕ್ಷ್ಮಾಣು ಅಮೀಬಾಕ್ಕೆ ಬಾಲಕ ಸಾವು! ಅಮೆರಿಕಕ್ಕೆ ಮತ್ತೊಂದು ಹೊಡೆತ

Advertisement

ಉತ್ತರಪ್ರದೇಶ ಪೊಲೀಸರು ಆರಂಭದಲ್ಲಿ ತಮಗೆ ಯಾವುದೇ ನೆರವು ನೀಡಲಿಲ್ಲ ಎಂದು ಆರೋಪಿಸಿರುವ ಯುವತಿಯ ಕುಟುಂಬಸ್ಥರು, ನಂತರ ಸಾರ್ವಜನಿಕ ಆಕ್ರೋಶ ಹೆಚ್ಚಾದ ಬಳಿಕ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.

ದೆಹಲಿಯಿಂದ 200 ಕಿಲೋ ಮೀಟರ್ ದೂರದಲ್ಲಿರುವ ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಸೆಪ್ಟೆಂಬರ್ 14ರಂದು ಯುವತಿ ತಮ್ಮ ಕುಟುಂಬದ ಸದಸ್ಯರ ಜತೆ ಹುಲ್ಲು ಕತ್ತರಿಸುತ್ತಿದ್ದ ವೇಳೆ ಆಕೆಯ ದುಪ್ಪಟ್ಟಾ ಬಲವಂತವಾಗಿ ಮತ್ತೊಂದು ಗದ್ದೆಗೆ ಎಳೆದೊಯ್ದು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು. ಕುಟುಂಬ ಸದಸ್ಯರಿಂದ ಈಕೆ ತುಂಬಾ ದೂರದಲ್ಲಿ ಇದ್ದಿದ್ದರಿಂದ ಅವರ ಗಮನಕ್ಕೆ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next