Advertisement
ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆನುವಂಶಿಕ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಅವರು ಮಾಜಿ ಮುಖ್ಯ ಮಂತ್ರಿ, ವಿಪಕ್ಷ ನಾಯಕ ಜಗದೀಶ ಶೆಟ್ಟರ್ ಅವರನ್ನು ದೇಗುಲದ ವತಿಯಿಂದ ಶಾಲು ಹೊದೆಸಿ ಮಹಾಪ್ರಸಾದ ನೀಡಿದರು.
ಇದರಿಂದಾಗಿ ಮುಂದಿನ ವರ್ಷ ನಡೆಯುವ ಯಾವುದೇ ಸಾರ್ವತ್ರಿಕ ಚುನಾವಣೆಗೆ ಯಾವುದೇ ರೀತಿಯ ಪರಿಣಾಮ ಬೀರದು. ಆಡಳಿತ ಪಕ್ಷವಿದ್ದಾಗ ಉಪಚುನಾವಣೆಯಲ್ಲಿ ಗೆಲ್ಲುವುದು ಸಹಜ. ಆದರೆ ಮೈಸೂರು ಮತ್ತು ಚಾಮರಾಜ ನಗರ ಜಿಲ್ಲೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪ್ರತಿಷ್ಠೆ ಹಾಗೂ ಒಡಾಡಿದ ಸ್ಥಳ ಹಣದ ಪ್ರಭಾವದಿಂದಲೇ ಈ ಉಪಚುನಾವಣಾ ಫಲಿತಾಂಶ ಬಂದಿದೆ. ಈ ಫಲಿತಾಂಶ ಉಪಚುನಾವಣೆಗೆ ಮಾತ್ರ ಸೀಮಿತ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ರಘುಪತಿ ಭಟ್, ಶಂಭು ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಒಬಿಸಿ ಅಧ್ಯಕ್ಷ ರಾಜೇಶ್ ಕಾವೇರಿ, ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆನುವಂಶಿಕ ಧರ್ಮದರ್ಶಿ ಕೆ. ರಮಣ ಉಪಾಧ್ಯಾಯ, ಮೆನೇಜರ್ ಆನಂದರಾಮ್ ಉರಾಳ, ಹಾಗೂ ಆನುವಂಶಿಕ ಪರ್ಯಾಯ ಅರ್ಚಕರಾದ ಕೆ. ಕೃಷ್ಣರಾಜ ಉಪಾಧ್ಯಾಯ ಮತ್ತು ಕೆ. ರವಿರಾಜ ಉಪಾಧ್ಯಾಯ, ಜಿ.ಪಂ.ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ, ಮಾಜಿ ಜಿ.ಪಂ. ಸದಸ್ಯ ಗಣಪತಿ ಟಿ. ಶ್ರೀಯಾನ್, ಕುಂಭಾಶಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀವಾಣಿ ಅಡಿಗ, ಕುಂದಾಪುರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸುರೇಶ್ ಶೆಟ್ಟಿ ಕಾಡೂರು, ಬಿಜೆಪಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಉಡುಪಿ ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷ ಪ್ರವೀಣ ಕುಮಾರ್ ಶೆಟ್ಟಿ, ಕೆದೂರು ಗ್ರಾ.ಪಂ. ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ ಶಾನಾಡಿ, ರವೀಂದ್ರ ದೊಡ್ಮನೆ, ಕಮಲಾಕ್ಷ ಪೈ ಕುಂಭಾಶಿ, ಗೋಪಾಡಿ ಸುರೇಶ್ ಶೆಟ್ಟಿ, ಮಹೇಶ್ ಪೂಜಾರಿ ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.
Related Articles
ಮುಖ್ಯಮಂತ್ರಿ ಸಿದ್ಧರಾಮಯ್ಯ ನವರ ಪ್ರತಿಷ್ಠೆಯ ಕಣವಾಗಿದ್ದ ರಾಜ್ಯದ ಜನತೆಯ ಕುತೂಹಲಕ್ಕೆ ಕಾರಣವಾಗಿದ್ದ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿರುವುದು ಉಪಚುನಾವಣೆಗೆ ಮಾತ್ರ ಸೀಮಿತವೇ ಹೊರತು ಬಿಜೆಪಿ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರದು. ಮುಖ್ಯಮಂತ್ರಿಗಳು ಬಹಳ ಪ್ರತಿಷ್ಠೆಯನ್ನಾಗಿ ಮಾಡಿ ಕೊಂಡು ದೊಡ್ಡ ಪ್ರಮಾಣದಿಂದ ಆಡಳಿತ ಪಕ್ಷದಿಂದ ಹಣ ಹೊಳೆ ಹರಿದಿದೆ ಹಣದ ಪ್ರಭಾವದ ಮುಂದೆ ನಮ್ಮ ಶಕ್ತಿ ಸಾಲಲಿಲ್ಲ ಅಂತ ಅನಿಸುತ್ತಿದೆ. ಈ ತಾತ್ಕಾಲಿಕ ಹಿನ್ನಡೆಯನ್ನೇ ಗೆಲುವಿಗೆ ದೊಡ್ಡ ಅಸ್ತ್ರವನ್ನಾಗಿಸಿಕೊಂಡು ಪಕ್ಷವನ್ನು ಮತ್ತಷ್ಟು ಬಲವರ್ಧಿಸುತ್ತೇವೆ. ರಾಜ್ಯ ಸರಕಾರದ ವಿರುದ್ಧದ ಅಲೆ ರಾಜ್ಯದ ಜನತೆಯಲ್ಲಿದೆ. ಮುಂದೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕು ಎನ್ನುವ ಅಭಿಪ್ರಾಯ ರಾಜ್ಯದ ಜನತೆಯದ್ದು, ಆದ್ದರಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ಒಳ್ಳೆಯ ಟ್ರೆಂಡ್ ಇದೆ . ಸೋಲು -ಗೆಲುವು ಸಹಜ ಮುಂದಿನ ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪಾರ್ಟಿಯನ್ನು ಮತ್ತಷ್ಟು ಬಲಪಡಿಸುತ್ತೇವೆ.
– ಜಗದೀಶ ಶೆಟ್ಟರ್
Advertisement