Advertisement

ಕಳ್ಳನಿಗೆ ಕೋವಿಡ್ ಶಂಕೆ; ಉಪನಗರ ಠಾಣೆ ಸಿಬ್ಬಂದಿ ಕ್ವಾರಂಟೈನ್‌

01:11 PM Jul 01, 2020 | Suhan S |

ಹುಬ್ಬಳ್ಳಿ: ಕಳ್ಳತನ ಪ್ರಕರಣದ ಆರೋಪಿಗೆ ಕೋವಿಡ್ ಸೋಂಕು ತಗುಲಿದ ಶಂಕೆ ಹಿನ್ನೆಲೆಯಲ್ಲಿ ಉಪನಗರ ಠಾಣೆ ಕೆಲ ಸಿಬ್ಬಂದಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಕ್ವಾರಂಟೈನ್‌ಗೆ ಒಳಪಡಿಸಿದ್ದು, ಉಳಿದ ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದೆ. ಠಾಣೆಗೆ ಔಷಧಿ ಸಿಂಪಡಿಸಲಾಗಿದೆ.

Advertisement

ಇತ್ತೀಚೆಗೆ ಕಳ್ಳತನ ಪ್ರಕರಣಗಳಲ್ಲಿ ಗದಗ-ಬೆಟಗೇರಿ ಮೂಲದ ವ್ಯಕ್ತಿಯನ್ನು ಉಪನಗರ ಠಾಣೆ ಪೊಲೀಸರು ಬಂಧಿಸಿ ಕಳ್ಳತನ ಮಾಡಿದ ವಸ್ತುಗಳನ್ನು ಜಪ್ತಿ ಮಾಡಿದ್ದರು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡುವ ಸಂದರ್ಭದಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದು, ಪ್ರಯೋಗಾಲಯದ ವರದಿಯಲ್ಲಿ ಸೋಂಕು ತಗುಲಿದೆ ಎನ್ನಲಾಗಿದೆ. ಆರೋಪಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಅಧಿಕಾರಿ ಹಾಗೂ ಸಿಬ್ಬಂದಿ ಸಾಂಸ್ಥಿಕ ಹಾಗೂ ಹೋಂ ಕ್ವಾರಂಟೈನ್‌ ಮಾಡಲಾಗಿದ್ದು, ಗಂಟಲು ದ್ರವ ಪರೀಕ್ಷೆಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಆದರೆ ಔಪಚಾರಿಕವಾಗಿ ಕೆಲ ನಿಮಿಷಗಳ ಕಾಲ ಮಾತ್ರ ಆರೋಪಿಯನ್ನು ಠಾಣೆಗೆ ಕರೆ ತಂದಿದ್ದು, ಆ ಸಂದರ್ಭದಲ್ಲಿ ಎಲ್ಲಾ ಸಿಬ್ಬಂದಿ ಇರಲಿಲ್ಲ ಎನ್ನಲಾಗಿದೆ. ಅಗತ್ಯ ಕೆಲ ಸಿಬ್ಬಂದಿ ಮಾತ್ರ ಠಾಣೆಯೊಳಗೆ ಇದ್ದುಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಂಗಳವಾರ ಬೆಳಗ್ಗಿನಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಇದೀಗ ಆರೋಪಿಯನ್ನು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದು, ಆತನನ್ನು ಕಾಯುವುದು ದೊಡ್ಡ ಕೆಲಸವಾಗಿ ಮಾರ್ಪಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next