Advertisement
ಬೇಸಗೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುವ ಹಿನ್ನೆಲೆಯಲ್ಲಿ ಹಾಗೂ ನೀರಾವರಿ ಉದ್ದೇಶದಿಂದ ಸುಳ್ಯ ಸಮೀಪ ಹರಿಯುತ್ತಿರುವ ಪಯಸ್ವಿನಿ ಹೊಳೆಗೆ ಕಲ್ಲುಮುಟ್ಲು ಎಂಬಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆ ವತಿಯಿಂದ 17 ಕೋಟಿ ರೂ. ಅನುದಾನ ಮಂಜೂರುಗೊಂಡು, ಟೆಂಡರ್ ಪ್ರಕ್ರಿಯೆ ನಡೆಸಲಾಗಿತ್ತು. ಕಳೆದ ಡಿ. 9ರಂದು ಸಚಿವ ಎಸ್. ಅಂಗಾರ ಕಾಮಗಾರಿಗೆ ಚಾಲನೆ ನೀಡಿದ್ದರು.
ಉಡುಪಿ ಮೂಲದ ಜಯಶೀಲ ನಾರಾಯಣ ಶೆಟ್ಟಿ ಎಂಬವರು ಕಾಮಗಾರಿ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಕಿಂಡಿ ಅಣೆಕಟ್ಟು ಕಾಮಗಾರಿ ಆರಂಭಿಸಲಾಗಿದೆ. ಹರಿಯುತ್ತಿರುವ ಹೊಳೆಯ ನೀರಿಗೆ ಕಾಮಗಾರಿ ನಡೆಸಲು ಅನುಕೂಲವಾಗುವಂತೆ ನೀರನ್ನು ಮಣ್ಣು ಹಾಕಿ ಹಿಡಿದಿಟ್ಟು, ಇನ್ನೊಂದು ಬದಿಯಿಂದ ಹರಿಯಲು ವ್ಯವಸ್ಥೆ ಕಲ್ಪಿಸಲಾಗಿದೆ. ಒಂದು ಭಾಗದಿಂದ ಕಿಂಡಿ ಅಣೆಕಟ್ಟು ಕಾಮಗಾರಿ ಆರಂಭಿಸಲಾಗಿದೆ. ಸದ್ರಿ ಕಿಂಡಿ ಅಣೆಕಟ್ಟಿನಲ್ಲಿ 9.34 ಮಿಲಿಯನ್ ಕ್ಯೂಬಿಕ್ ಅಡಿ ನೀರಿನ ಸಂಗ್ರಹ ಸಾಮರ್ಥ್ಯ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಮಗಾರಿ 11 ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಸರಕಾರ ಸೂಚಿಸಿದ ಸುತ್ತೂಲೆಯಲ್ಲಿದೆ. ಮಳೆಗಾಲ ಕಾಮಗಾರಿ ಅಸಾಧ್ಯವಿರುತ್ತದೆ. ಬಳಿಕ ಕಾಮಗಾರಿ ವೇಗ ಪಡೆದಲ್ಲಿ ಮುಂದಿನ ಮಳೆಗಾಲದ ಮೊದಲು ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
Related Articles
ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಸ್ತುತ ಬೇಸಗೆಯಲ್ಲಿ ನೀರಿನ ಅಭಾವ ಕಂಡುಬರುತ್ತದೆ. ಕಲ್ಲುಮುಟ್ಲುನಲ್ಲಿ ಕಿಂಡಿಅಣೆಕಟ್ಟು ಪೂರ್ಣಗೊಂಡಲ್ಲಿ ಈ ಭಾಗದ ನೀರಿನ ಅಭಾವ ದೂರವಾಗಲಿದೆ ಎನ್ನುವುದು ಜನತೆಯ ನಿರೀಕ್ಷೆ. ಜತೆಗೆ ಇದರ ಪಕ್ಕದಲ್ಲಿ ಜಾಕ್ ವೆಲ್ ಕಾಮಗಾರಿಯೂ ಭರದಿಂದ ನಡೆಯುತ್ತಿದೆ. ಮುಂದಕ್ಕೆ ಅಧಿಕ ಸಾಮರ್ಥ್ಯದ ನೀರು ಶುದ್ಧೀಕರಣ ಘಟಕದ ಅಗತ್ಯತೆ ಇಲ್ಲಿಗಿದೆ.
Advertisement
ಶೇ. 40 ಕಾಮಗಾರಿ ಪೂರ್ಣಸುಳ್ಯ ನಗರಕ್ಕೆ ನೀರಿನ ಉದ್ದೇಶದಿಂದ ಕಲ್ಲುಮುಟ್ಲು ನಲ್ಲಿ ಕಿಂಡಿ ಅಣೆಕಟ್ಟು ಕಾಮಗಾರಿ ಭರದಿಂದ ನಡೆಯುತ್ತಿದೆ. ಈಗಾಗಲೇ ಶೇ. 40 ಕಾಮಗಾರಿ ನಡೆದಿದೆ. ಎಪ್ರಿಲ್ ಮೊದಲು ಕಾಮಗಾರಿ ಮುಗಿಸಲು ಪ್ರಯತ್ನಿಸಲಾಗುವುದು.
-ಹೇಮಂತ್ ಕುಮಾರ್, ಎಂಜಿನಿಯರ್,
ಸಣ್ಣ ನೀರಾವರಿ ಇಲಾಖೆ