Advertisement

ಬಿರುಸಿನ ಚಿತ್ರೀಕರಣದಲ್ಲಿ ‘ಲಗಾಮ್‌’

02:20 PM Sep 11, 2021 | Team Udayavani |

ಉಪೇಂದ್ರ ನಾಯಕರಾಗಿರುವ “ಲಗಾಮ್‌’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ.ಮುಂದಿನ ದಿನಗಳಲ್ಲಿಚಿತ್ರೀಕರಣಕ್ಕೆ ವಿದೇಶಕ್ಕೆ ಚಿತ್ರತಂಡ ತೆರಳಲಿದೆ.

Advertisement

ಈ ಚಿತ್ರದಲ್ಲಿ ಉಪೇಂದ್ರ ಅವರಿಗೆ ವಿಭಿನ್ನ ಪಾತ್ರ ಸಿಕ್ಕಿದೆ. ತಮ್ಮ ಪಾತ್ರದ ಬಗ್ಗೆ ಮಾತನಾಡುವ ನಟ ಉಪೇಂದ್ರ, “ಇತ್ತೀಚಿನ ವರ್ಷಗಳಲ್ಲಿ ನಾನು ಮಾಡಿದ ಸಿನಿಮಾಗಳಿಗಿಂತ ತುಂಬ ವಿಭಿನ್ನವಾದ ಸಿನಿಮಾ ಇದು. ನಮ್ಮ ನಡುವೆಯೇ ನಡೆಯುವ ಕೆಲವೊಂದು ಅಂಶಗಳು ಈ ಸಿನಿಮಾದಲ್ಲಿದೆ. ಹಾಗಂತ ಇಲ್ಲಿ ರಾಜಕೀಯ ಇಲ್ಲ. ಸಿನಿಮಾದಕಥೆ ತುಂಬ ಚೆನ್ನಾಗಿದೆ. ಆಡಿಯನ್ಸ್‌ಗೂ ಸಿನಿಮಾ ಇಷ್ಟವಾಗುತ್ತದೆ ಎಂಬ ನಂಬಿಕೆಯಿದೆ ಎಂದರು.

ಇದನ್ನೂ ಓದಿ:ಖ್ಯಾತ ಮಲಯಾಳಂ ನಟ ರಮೇಶ್ ವಲಿಯಸಲಾ ಆತ್ಮಹತ್ಯೆ

ಎಂಟರ್‌ಟೈನ್ಮೆಂಟ್‌ ಗೆ ಬೇಕಾದ ಎಲ್ಲ ಅಂಶಗಳನ್ನೂ “ಲಗಾಮ್‌’ನಲ್ಲಿ ನೋಡಬಹುದು. ಆದಷ್ಟು ಬೇಗ ಸಿನಿಮಾ ಮುಗಿಸಿ ಥಿಯೇಟರ್‌ಗೆ ಬರೋದಕ್ಕೆ ನಾವು ಕಾತುರರಾಗಿದ್ದೇವೆ. ಈ ಸಿನಿಮಾವನ್ನು ಬಹಳ ದೊಡ್ಡದಾಗಿ ಮಾಡುತ್ತಿದ್ದಾರೆ. ವಿಡಂಬನೆ, ಭ್ರಷ್ಟಾಚಾರ ಸೇರಿದಂತೆ ಒಂದಷ್ಟು ವಿಷಯಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆçವೆ. ಅದರ ಬಗ್ಗೆ ನಾನು ಹೆಚ್ಚಿಗೆ ಹೇಳಲಾಗುವುದಿಲ್ಲ. ನಿರ್ದೇಶಕರು ಏನು ಹೇಳಿದ್ದಾರೋ ಅದೇ ಫೈನಲ್. ಸಿನಿಮಾದಲ್ಲಿಯೇ ಎಲ್ಲವನ್ನೂ ನೋಡಬೇಕು ಎಂಬುದು ನನ್ನಾಸೆ. ಒಂದಷ್ಟು ಸಾಮಾಜಿಕ ವಿಡಂಬನೆ ಈ ಸಿನಿಮಾದಲ್ಲೂ ಇರುತ್ತದೆ’ ಎನ್ನುತ್ತಾರೆ ಉಪೇಂದ್ರ.

Advertisement

Udayavani is now on Telegram. Click here to join our channel and stay updated with the latest news.

Next