“ಬುದ್ಧಿವಂತ-2′- ಹೀಗೊಂದು ಸಿನಿಮಾ ಅನೇಕ ದಿನಗಳಿಂದ ಉಪೇಂದ್ರ ಅವರ ಸಿನಿಲಿಸ್ಟ್‌ನಲ್ಲಿ ಸದ್ದು ಮಾಡುತ್ತಲೇ ಇತ್ತು. ಆದರೆ, ಚಿತ್ರದ ಬಿಡುಗಡೆ ಮಾತ್ರ ಯಾವಾಗ ಎಂಬುದರ ಬಗ್ಗೆ ಮಾಹಿತಿ ಇರಲಿಲ್ಲ. ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಉಪೇಂದ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ.
ಸೆಪ್ಟೆಂಬರ್ 18 ಉಪೇಂದ್ರ ಹುಟ್ಟುಹಬ್ಬ. ಈ ಸಂದರ್ಭ ದಲ್ಲಿ ಸಿನಿಮಾ ಬಿಡುಗಡೆ ಮಾಡಿ, ಉಪ್ಪಿ ಹಾಗೂ ಅವರ ಅಭಿಮಾನಿಗಳಿಗೆ ಗಿಫ್ಟ್ ನೀಡಲಿದೆ. ಅಂದಹಾಗೆ, ಚಿತ್ರದ ಬಿಡುಗಡೆ ದಿನಾಂಕವನ್ನು ವಿಶೇಷ ಟೀಸರ್ ಮೂಲಕ ಅನೌನ್ಸ್ ಮಾಡಲು ಚಿತ್ರತಂಡ ಪ್ಲ್ರಾನ್ ಮಾಡಿಕೊಂಡಿದೆ.
“ಚಮಕ್’, “ಅಯೋಗ್ಯ’ ಸೇರಿದಂತೆ ಅನೇಕ ಚಿತ್ರಗಳನ್ನು ನಿರ್ಮಾಣ ಮಾಡಿರುವ ಡಾ.ಟಿ.ಆರ್ ಚಂದ್ರಶೇಖರ್ ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ಮತ್ತೂಂದು ಈ ಚಿತ್ರ ನಿರ್ಮಿಸಿದ್ದಾರೆ.
ಉಪೇಂದ್ರ ಈ ಚಿತ್ರದಲಿ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ಜಯರಾಮ್ ಮಾಧವನ್ “ಬುದ್ಧಿವಂತ-2′ ಚಿತ್ರದ ನಿರ್ದೇಶಕರು. ಗುರುಕಿರಣ್ ಸಂಗೀತ ನೀಡಿದ್ದಾರೆ. ಎಸ್ ನವೀನ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಉಪೇಂದ್ರ ಅವರಿಗೆ ನಾಯಕಿಯರಾಗಿ ಸೋನಾಲ್ ಮೊಂಥೆರೋ ಹಾಗೂ ಮೇಘನಾ ರಾಜ್ ನಟಿಸಿದ್ದಾರೆ. ಶ್ರೀನಗರ ಕಿಟ್ಟಿ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.