Advertisement
ವಿವಿಧ ಖಾಸಗಿ ಕಂಪೆನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಬಳಸಿಕೊಂಡು ರಾಜ್ಯದಲ್ಲಿ ಆವಶ್ಯವಿರುವ 200 ಸರಕಾರಿ ಆರೋಗ್ಯ ಕೇಂದ್ರಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಮಂಗಳವಾರ ಆರೋಗ್ಯ ಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಿಎಸ್‌ಆರ್ ಬಾಕ್ಸ್ ಕಂಪೆನಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಮೊದಲ ಹಂತದಲ್ಲಿ ರಾಯಚೂರು ಜಿಲ್ಲೆಯ10 ಸರಕಾರಿ ಆರೋಗ್ಯ ಕೇಂದ್ರಗಳ ಮೂಲಸೌಕರ್ಯಗಳ ಕಾಮಗಾರಿಯನ್ನು 3 ಕೋಟಿ ರೂ. ಸಿಎಸ್‌ಆರ್ ಅನುದಾನದಲ್ಲಿ ಮಾಡಲಾಗುತ್ತಿದೆ. ಇದರ ಕಾರ್ಯ ಪ್ರಗತಿಯಲ್ಲಿದೆ. 2024ರ ಫೆ. ಅಂತ್ಯಕ್ಕೆ ಕಾಮಗಾರಿ ಮುಕ್ತಾಯವಾಗಲಿದೆ. ರಾಜ್ಯದಲ್ಲಿ ಮೂಲಸೌಕರ್ಯ ಹಾಗೂ ಯಂತ್ರೋಪಕರಣಗಳ ಅಗತ್ಯವಿರುವ 200 ಸರಕಾರಿ ಆರೋಗ್ಯ ಕೇಂದ್ರಗಳನ್ನು ಗುರುತಿಸಲಾಗಿದೆ. ಆಸ್ಪತ್ರೆಗಳ ಅಗತ್ಯಕ್ಕೆ ತಕ್ಕಂತೆ ಕಟ್ಟಡ ನಿರ್ಮಾಣ, ಶೌಚಾಲಯ, ಕಟ್ಟಡ ಮೇಲ್ಛಾವಣಿ, ಕೊಠಡಿ ಸೇರಿದಂತೆ ಇತರ ನಿರ್ಮಾಣ ಕಾಮಗಾರಿ ಮಾಡಲಾಗುತ್ತದೆ.