Advertisement

ಹೊನ್ನಾಳಿ ತಾಲೂಕು ಆಸ್ಪತ್ರೆ ಶೀಘ್ರ ಮೇಲ್ದರ್ಜೆಗೆ

01:54 PM Apr 26, 2022 | Team Udayavani |

ಹೊನ್ನಾಳಿ: ಪಟ್ಟಣದ ತಾಲೂಕು ಆಸ್ಪತ್ರೆಯನ್ನು ನೂರು ಹಾಸಿಗೆಯಿಂದ 250 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂದು ಎಂ.ಪಿ. ರೇಣುಕಾಚಾರ್ಯ ಹೇಳಿದರು.

Advertisement

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ತಾಲೂಕು ಆಡಳಿತ ತಾಪಂ, ಪುರಸಭೆ, ತಾಲೂಕು ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಪಟ್ಟಣದ ತಾಲೂಕು ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನ್ಯಾಮತಿ ಪಟ್ಟಣದ ಈಗಿನ 50 ಹಾಸಿಗೆ ಆಸ್ಪತ್ರೆಯನ್ನು ನೂರು ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುವುದು. ಹಿಂದಿನ ನನ್ನ ಆಡಳಿತಾವಧಿಯಲ್ಲಿ ಹೊನ್ನಾಳಿ ಪಟ್ಟಣದ ಆಸ್ಪತ್ರೆ ಹಾಗೂ ನ್ಯಾಮತಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿದ್ದಲ್ಲದೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯನ್ನು ದುರ್ಗಿಗುಡಿ ಬಡಾವಣೆಯಲ್ಲಿ ಸುಸಜ್ಜಿತವಾದ ಕಟ್ಟಡ ನಿರ್ಮಾಣ ಮಾಡಲಾಯಿತು. ಈಗ ಆಸ್ಪತ್ರೆಯಲ್ಲಿ ಎಲ್ಲಾ ವಿಧವಾದ ತಜ್ಞ ವೈದ್ಯರಿದ್ದು ಇದರಿಂದ ಹೊನ್ನಾಳಿ ತಾಲೂಕು ಅಲ್ಲದೆ ರಟ್ಟೆಹಳ್ಳಿ, ಹಿರೇಕೆರೂರು ತಾಲೂಕುಗಳ ಹಳ್ಳಿಗಳ ರೋಗಿಗಳು ತಪಾಸಣೆಗೆ ಹಾಗೂ ಚಿಕಿತ್ಸೆಗೆ ಆಗಮಿಸುತ್ತಿದ್ದಾರೆ ಎಂದರು.

ಪುರಸಭೆ ಅಧ್ಯಕ್ಷ ಬಾಬು ಹೋಬಳದಾರ್‌, ಉಪಾಧ್ಯಕ್ಷೆ ರಂಜಿತಾ ಚನ್ನಪ್ಪ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಗಂಗಾಧರ, ಡಾ| ಎ.ಎಂ. ರೇಣುಕಾರಾಧ್ಯ, ಡಾ| ಗಿರೀಶ್‌, ಡಾ| ಚಂದ್ರಪ್ಪ, ಡಾ| ಸುದೀಪ್‌ಕುಮಾರ್‌, ಸಿಪಿಐ ಟಿ.ವಿ. ದೇವರಾಜ್‌, ಪಿಎಸ್‌ಐ ಬಸವರಾಜ್‌ ಬಿರಾದಾರ್‌, ಪುರಸಭೆ ಮುಖ್ಯಾಧಿಕಾರಿ ಎಸ್‌. ಆರ್‌. ವೀರಭದ್ರಯ್ಯ, ಸಿಡಿಪಿಒ ಮಹಾಂತೇಶ ಪೂಜಾರ್‌ ಉಪಸ್ಥಿತರಿದ್ದರು. ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ| ಪಿ.ಡಿ. ಮುರಳಿಧರ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಆರೋಗ್ಯ ಸಹಾಯಕ ಶಿವಪದ್ಮ ಸ್ವಾಗತಿಸಿದರು.

ನಾನು ತಾಲೂಕಿನ ಶಾಸಕನಷ್ಟೇ ಅಲ್ಲ, ಜನಸೇವಕನೆಂದು ಅರಿತು ಕೆಲಸ ಮಾಡುತ್ತಿದ್ದೇನೆ. ಸೋತಾಗ ಮನೆಯಲ್ಲಿ ಕುಳಿತುಕೊಳ್ಳದೆ ಸದಾ ಜನರ ಮಧ್ಯೆ ಇದ್ದು ಕೆಲಸ ಮಾಡಿದ್ದೇನೆ. ಈ ಕಾರಣಕ್ಕಾಗಿ ನನ್ನನ್ನು ಜನರು ಮೂರು ಬಾರಿ ಆಯ್ಕೆ ಮಾಡಿದ್ದಾರೆ. ಎಂ.ಪಿ. ರೇಣುಕಾಚಾರ್ಯ, ಸಿಎಂ ರಾಜಕೀಯ ಕಾರ್ಯದರ್ಶಿ

Advertisement

Udayavani is now on Telegram. Click here to join our channel and stay updated with the latest news.

Next