Advertisement

Feb.26ಕ್ಕೆ ಸಾಗರ-ಜಂಬಗಾರು ರೈಲ್ವೆ ನಿಲ್ದಾಣದ ಉನ್ನತೀಕರಣ ಕಾಮಗಾರಿಗೆ ಚಾಲನೆ

06:05 PM Feb 20, 2024 | Team Udayavani |

ಸಾಗರ: ಸುಮಾರು 26 ಕೋಟಿ ರೂ. ವೆಚ್ಚದಲ್ಲಿ ಸಾಗರ-ಜಂಬಗಾರು ರೈಲ್ವೆ ನಿಲ್ದಾಣದ ಉನ್ನತೀಕರಣ ಸೇರಿದಂತೆ ಜಿಲ್ಲೆಯ ನಾಲ್ಕು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗಳಿಗೆ ಫೆ. 26ರಂದು ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್ ಕಾರ‍್ಯಕ್ರಮದಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಇಲಾಖೆಯ ಸಹಾಯಕ ವಿಭಾಗೀಯ ಅಭಿಯಂತರ ಹರಿ ರಾಮ್ ಮೀನಾ ಹೇಳಿದರು.

Advertisement

ಮಂಗಳವಾರ ಇಲ್ಲಿನ ರೈಲ್ವೆ ನಿಲ್ದಾಣದ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಅಮೃತ್ ಭಾರತ್ ಯೋಜನೆಯಡಿ ಫೆ. 26ರಂದು ನಡೆಯುವ ಸಮಾರಂಭದಲ್ಲಿ ರಾಜ್ಯದ 55 ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆ ಮಾಡಲಿದ್ದು, ಇದರಲ್ಲಿ ಜಿಲ್ಲೆಯ ಶಿವಮೊಗ್ಗ, ಅರಸಾಳು, ಸಾಗರ ಜಂಬಗಾರು ಹಾಗೂ ತಾಳಗುಪ್ಪ ನಿಲ್ದಾಣಗಳು ಸೇರಿವೆ.

ಮುಂದಿನ ಎರಡು ವರ್ಷದೊಳಗೆ ಈ ಕಾಮಗಾರಿ ಕೆಲಸಗಳು ಮುಗಿಯಲಿದ್ದು, ನಿಲ್ದಾಣದ ಉನ್ನತೀಕರಣ, ಸಮರ್ಪಕ ಪಾರ್ಕಿಂಗ್, ಸಂಪರ್ಕ ರಸ್ತೆ ಅಭಿವೃದ್ಧಿ, ತಂಗುದಾಣದ ಮೇಲ್ಛಾವಣಿ ಅಳವಡಿಕೆ ಮೊದಲಾದವು ಸೇರಿವೆ ಎಂದರು.

ಮುಂದಿನ ಎರಡು ವರ್ಷದಲ್ಲಿ ಸಾಗರ  ಜಂಬಗಾರು ರೈಲ್ವೆ ನಿಲ್ದಾಣ ಸೇರಿದಂತೆ ಎಲ್ಲ ಕಡೆಯಲ್ಲೂ ಉನ್ನತೀಕರಣಗೊಳಿಸಲು ಈ ಯೋಜನೆಯಡಿ ತೀರ್ಮಾನಿಸಲಾಗಿದೆ. ಕಾಮಗಾರಿ ನಡೆಯುತ್ತಿರುವಲ್ಲಿಗೆ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಅಧಿಕಾರಿಗಳ ತಂಡವು ಮಂಗಳವಾರ ಸಾಗರ, ತಾಳಗುಪ್ಪ, ಅರಸಾಳು ನಿಲ್ದಾಣಗಳಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ, ವರ್ಚುಯಲ್ ಕಾರ್ಯಕ್ರಮಕ್ಕೆ ಅಗತ್ಯವಿರುವ ಸ್ಥಳ ಪರಿಶೀಲನೆ ನಡೆಸಿ, ಸ್ಥಳೀಯ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ನೀಡಿತು.

Advertisement

ರೈಲ್ವೆ ಇಲಾಖೆಯ ಮುಖ್ಯ ಅಭಿಯಂತರ ಸಂತೋಷ್, ಎಲೆಕ್ಟ್ರಿಕ್ ವಿಭಾಗದ ಅಭಿಯಂತರ ಅಭಿಷೇಕ್, ಮುಖ್ಯ ವಾಣಿಜ್ಯ ಅಧಿಕ್ಷಕ ಮಂಜುನಾಥ್, ಇಲಾಖೆಯ ಅಕ್ಷಯ್ ಕುಮಾರ್, ಚಂದ್ರಕಾಂತ್, ಸಾಗರ ಬ್ರಾಡ್‌ಗೇಜ್ ಹೋರಾಟ ಸಮಿತಿ ಕಾರ‍್ಯದರ್ಶಿ ಕುಮಾರಸ್ವಾಮಿ, ಸದಸ್ಯ ಗುರುತೀರ್ಥ, ಮೊದಲಾದವರು ಹಾಜರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next