Advertisement
ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಟಾಟಾಟೆಕ್ನಾಲಜಿಸ್‌ಕಂಪನಿಅಧ್ಯಕ್ಷ ಆನಂದ್ ಭಡೆ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋ ಪಾಯ ಇಲಾಖೆಯ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಅವರು ಒಪ್ಪಂದಕ್ಕೆ ಸಹಿ ಹಾಕಿದರು. ದೇಶದಲ್ಲೇ ಪ್ರಥಮ ಬಾರಿಗೆ ರಾಜ್ಯ ಸರ್ಕಾರ ಹಾಗೂ ಉದ್ಯಮಗಳು ಕೈಜೋಡಿಸಿರುವ ವಿನೂತನ ಪ್ರಯತ್ನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.
Related Articles
Advertisement
ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಇ.ವಿ. ರಮಣರೆಡ್ಡಿ, ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ಡಾ.ಕೆ.ವಿ. ತ್ರಿಲೋಕ್‌ಚಂದ್ರ ಇತರ ಹಿರಿಯ ಅಧಿಕಾರಿಗಳಿದ್ದರು.
ಐಟಿಐ ವಿದ್ಯಾರ್ಥಿಗಳಿಗೆ ಆಧುನಿಕ ತರಬೇತಿ : ಈ ಒಪ್ಪಂದದ ಅನ್ವಯ ಐಟಿಐ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಉದ್ಯೋಗಾವಕಾಶ ಸೃಷ್ಟಿಸುವ ಉದ್ದೇಶ ಹೊಂದಿದೆ.ರಾಜ್ಯದಲ್ಲಿ270 ಸರ್ಕಾರಿ,196 ಅನುದಾನಿತ,1247 ಖಾಸಗಿ ಐಟಿಐ ಸೇರಿದಂತೆ ಒಟ್ಟು1713 ಐಟಿಐ ಸಂಸ್ಥೆಗಳಿದ್ದು, ಪ್ರತಿವರ್ಷ 1.8 ಲಕ್ಷ ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ಸದ್ಯ150 ಐಟಿಐ ಸಂಸ್ಥೆಗಳಲ್ಲಿ ನೀಡಲಾಗುವ ವಿಶೇಷ ತರಬೇತಿಗಳ ಅನುಕೂಲವನ್ನು ಇತರ ಐಟಿಐ, ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳೂ ಪಡೆದುಕೊಳ್ಳಲು ಅವಕಾಶಕಲ್ಪಿಸಲಿದೆ. ಒಟ್ಟು 10 ವರ್ಷ 9 ತಿಂಗಳಿಗೆ ಒಪ್ಪಂದ ಏರ್ಪಟ್ಟಿದ್ದು, ಟಾಟಾ ಟೆಕ್ನಾಲಜಿಸ್‌ಕಂಪನಿಯು ತರಬೇತಿ, ಮಾರ್ಗದರ್ಶನ ಹಾಗೂ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಲು “ಟಿಸಿಪಿಸಿ’ (ಟ್ರೈನಿಂಗ್, ಕೌನ್ಸೆಲಿಂಗ್ ಆ್ಯಂಡ್ ಪ್ಲೇಸ್‌ಮೆಂಟ್ ಸೆಲ್) ಬಲಪಡಿಸುವುದು. ಹೊಸ ಯಂತ್ರೋಪಕರಣ, ತಂತ್ರಜ್ಞಾನದ ಅಳವಡಿಕೆ ಮೂಲಕ ಪ್ರಯೋಗಾಲಯಗಳನ್ನು ಉನ್ನತೀಕರಿಸುವುದು ಹಾಗೂ ಕೈಗಾರಿಕೆಯ ಸ್ಥಿತ್ಯಂತರಗಳಿಗೆ ತಕ್ಕಂತೆ ಅಧ್ಯಯನ ವಿಷಯಗಳನ್ನು ರೂಪಿಸುವ ವ್ಯವಸ್ಥೆಕಲ್ಪಿಸಲಿದೆ.
ಮೊದಲ ಹಂತದಲ್ಲಿ 6ಐಟಿಐ ಉನ್ನತೀಕರಣ : ವಿದ್ಯುಚ್ಛಾಲಿತ ವಾಹನಗಳು,ಕೃಷಿ ಯಂತ್ರೋಪಕರಣಗಳು, ಏರೋಸ್ಪೇಸ್ ಮತ್ತು ರಕ್ಷಣಾ ಉಪಕರಣಗಳು, ತೋಟಗಾರಿಕೆ ಮತ್ತು ಸ್ಮಾರ್ಟ್‌ಸಿಟಿ ಹಾಗೂ ಇತರ ವಲಯಗಳಲ್ಲಿ ತರಬೇತಿಗೆ ಆದ್ಯತೆ ನೀಡಲಿದೆ. ಟಾಟಾ ಟೆಕ್ನಾಲಜಿಸ್ ಕಂಪನಿ ಹಾಗೂ ಸಹಭಾಗಿತ್ವದ ಇತರೆ ಕೈಗಾರಿಕೆಗಳಲ್ಲಿನ300 ತರಬೇತಿದಾರರು ಈ 150 ಐಟಿಐಗಳಲ್ಲಿ ತರಬೇತಿ ನೀಡಲಿದ್ದಾರೆ. ರಾಜ್ಯದ ಎಲ್ಲ ಸರ್ಕಾರಿ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ಐಟಿಐಗಳಲ್ಲಿ ಆನ್‌ಲೈನ್ ತರಬೇತಿ ನೀಡಲಾಗುತ್ತದೆ. ಮೊದಲ ಹಂತದಲ್ಲಿ ಪೀಣ್ಯ, ಹೊಸೂರು ರಸ್ತೆ, ಬಳ್ಳಾರಿ, ಮೈಸೂರು, ದಾಸ್ತಿಕೊಪ್ಪ ಹಾಗೂಶಿಕಾರಿಪುರದ ಸರ್ಕಾರಿ ಐಟಿಐಗಳ ಉನ್ನತೀಕರಣ ಕೈಗೊಳ್ಳಲಾಗುವುದು.