ಉಪ್ಪಳ: ಮಂಗಲ್ಪಾಡಿ ತಾಲೂಕು ಹೆಡ್ ಕ್ವಾರ್ಟರ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನೀಶಿಯನ್ ಆಗಿದ್ದ ನೀಲೇಶ್ವರದ ಕಡಿಂಞಿಮೂಲೆ ನಿವಾಸಿ ಐಶ್ವರ್ಯಾ (23) ರೈಲು ಢಿಕ್ಕಿ ಹೊಡೆದು ಸಾವಿಗೀಡಾದರು.
Advertisement
ಅವರಿಗೆ ಮಂಗಳೂರಿನಿಂದ ಕಣ್ಣೂರಿಗೆ ಪ್ರಯಾಣಿಸುತ್ತಿದ್ದ ಚೆನ್ನೈ ಎಕ್ಸ್‌ಪ್ರೆಸ್ ರೈಲು ಢಿಕ್ಕಿ ಹೊಡೆದು ಸಾವು ಸಂಭವಿಸಿತು. ರೈಲು ನಿಲ್ದಾಣದಿಂದ ಅಲ್ಪ ದೂರದಲ್ಲಿ ಮೃತದೇಹ ಪತ್ತೆಯಾಗಿತ್ತು. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.