Advertisement

ಮೇಲ್ಮನೆ ಚುನಾವಣೆ: ಬಿಜೆಪಿ ಪ್ರಭಾರಿಗಳ ನೇಮಕ

08:45 PM May 17, 2024 | Team Udayavani |

ಬೆಂಗಳೂರು : ಪದವೀಧರ ಹಾಗೂ ಶಿಕ್ಷಣ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಪ್ರಭಾರಿಗಳ ಪಟ್ಟಿ ಬಿಡುಗಡೆ ಮಾಡಿದೆ.

Advertisement

ಈಶಾನ್ಯ ಪದವೀಧರ ಕ್ಷೇತ್ರಕ್ಕೆ ವಿಧಾನ ಪರಿಷತ್‌ ಮುಖ್ಯ ಸಚೇತಕ ಎನ್‌.ರವಿಕುಮಾರ್‌, ನೈರುತ್ಯ ಪದವೀಧರ ಕ್ಷೇತ್ರಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‌ ಕುಮಾರ್‌, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಕಾರ್ಯದರ್ಶಿ ಡಿ.ಎಸ್‌.ಅರುಣ್‌, ಬೆಂಗಳೂರು ಪದವೀಧರಕ್ಕೆ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ ಅವರನ್ನು ಉಸ್ತುವಾರಿಯಾಗಿ ನೇಮಕಗೊಳಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next