Advertisement

ಉಪ್ಪಿನಕುದ್ರು ಬೊಂಬೆಯಾಟಕ್ಕೆ ಶ್ರೀ ವಿಶ್ವೇಶತೀರ್ಥ ಪ್ರಶಸ್ತಿ

12:21 PM Oct 15, 2022 | Team Udayavani |

ಉಡುಪಿ : ಆರು ತಲೆ ಮಾರುಗಳಿಂದ ಯಕ್ಷಗಾನ ಗೊಂಬೆಯಾಟ ನಡೆಸಿಕೊಂಡು ಬಂದಿರುವ ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್‌ ಮೆಮೋರಿಯಲ್‌ ಯಕ್ಷಗಾನ ಬೊಂಬೆಯಾಟ ಟ್ರಸ್ಟ್‌ ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಈ ಬಾರಿ ಉಡುಪಿಯ ಯಕ್ಷಗಾನ ಕಲಾರಂಗ ನೀಡುವ ಶ್ರೀವಿಶ್ವೇಶತೀರ್ಥ ಪ್ರಶಸ್ತಿಗೆ ಆಯ್ಕೆಯಾಗಿದೆ.

Advertisement

ಪರಂಪರೆಯ ಹಾಡುಗಾರಿಕೆ ಮತ್ತು ಅರ್ಥಗಾರಿಕೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸಿದ ಈ ಸಂಸ್ಥೆ ಈ ಪ್ರದೇಶ ಮಾತ್ರವಲ್ಲದೇ ವಿವಿಧ ದೇಶಗಳಲ್ಲಿ ಈ ಕಲೆಯನ್ನು ಪ್ರದರ್ಶಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಸಕ್ತ ಭಾಸ್ಕರ ಕೊಗ್ಗ ಕಾಮತರು ಇದರ ನಿರ್ದೇಶಕರಾಗಿದ್ದು, ಉಪ್ಪಿನ ಕುದ್ರು  ವಿನಲ್ಲಿ ಎಲ್ಲ ಮೂಲ ಸೌಕರ್ಯಗಳನ್ನು ಹೊಂದಿರುವ ಸುಸಜ್ಜಿತ ರಂಗಮಂದಿರವನ್ನು ನಿರ್ಮಿಸಿ ಅದನ್ನು ಬೇರೆ ಬೇರೆ ಕಲಾಪ್ರಕಾರಗಳಿಗೂ ಉಚಿತವಾಗಿ ನೀಡುತ್ತ ವಿವಿಧ ಕಲಾ ಸಂವರ್ಧನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ.

ಪ್ರಶಸ್ತಿಯು 50,000 ರೂ. ನಗದು ಮತ್ತು ಪ್ರಶಸ್ತಿ ಫ‌ಲಕಗಳನ್ನೊಳಗೊಂಡಿದ್ದು, ಪ್ರಶಸ್ತಿ ಪ್ರದಾನ ಸಮಾರಂಭ ನ.13ರಂದು ಮಂಗಳೂರಿನ ಟೌನ್‌ ಹಾಲ್‌ನಲ್ಲಿ ಜರಗಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್‌ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ : ಕಾವೂರು : ಅಂಗಡಿಯಲ್ಲಿ ಬಟ್ಟೆ ಎಗರಿಸಿದ ಬುರ್ಖಾಧಾರಿ ಮಹಿಳೆ… ವಿಡಿಯೋ ವೈರಲ್

Advertisement

Udayavani is now on Telegram. Click here to join our channel and stay updated with the latest news.

Next