Advertisement

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ

04:35 PM Dec 06, 2019 | Team Udayavani |

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯ ತೆಕ್ಕಾರು ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

Advertisement

ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಮರಮೆ ಮನೆ ನಿವಾಸಿ ಪ್ರಥಮ್ ಕೊಂಡೆ (19)  ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.  ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿ.  ಡಿ.5 ರಂದು ಮನೆಯಲ್ಲಿದ್ದ ಈತ ಬೆಳಗ್ಗೆ ಮನೆಯ ಬಳಿಯ ಮಾವಿನಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆಯ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next