Advertisement
ಉಪ್ಪಿನಂಗಡಿ-ಹಿರೇಬಂಡಾಡಿ ರಸ್ತೆಯಲ್ಲಿ ನೂಜಿ ತನಕ 2 ಕಿ.ಮೀ. ರಸ್ತೆ ದುರಸ್ತಿಗೆ ಪ್ರಾಕೃತಿಕ ವಿಕೋಪ, ಮಳೆ ಹಾನಿ ಅನುದಾನದ ಅಡಿಯಲ್ಲಿ 28 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಅದರ ಡಾಮರು ಕಾಮಗಾರಿ ಆರಂಭವಾಗಿದೆ. ಆದರೆ ಕಾಮಗಾರಿ ವಹಿಸಿಕೊಂಡಿರುವ ಗುತ್ತಿಗೆದಾರರು ಕಾಟಾಚಾರಕ್ಕೆ ಕೆಲಸ ನಿರ್ವಹಿಸುತ್ತಿದ್ದಾರೆ. ಕಾಮಗಾರಿ ತೀರಾ ಬೇಜವಾಬ್ದಾರಿತನದಿಂದ ನಡೆಯುತ್ತಿದೆ ಎಂದು ಗ್ರಾಮಸ್ಥರು ದೂರಿಕೊಂಡಿದ್ದಾರೆ.
ಮಳೆಹಾನಿ ಅನುದಾನದಿಂದ ಕಾಮಗಾರಿ ನಡೆಯುತ್ತಿದ್ದು, ಡಾಮರು ಆದ ರಸ್ತೆಯಲ್ಲಿ ವಾಹನಗಳು ಸಂಚರಿಸುವಾಗ ಕಳಪೆ ಕಾಮಗಾರಿಯ ದರ್ಶನವಾಗುತ್ತಿದೆ. ಮೊದಲ ಮಳೆಗೇ ಡಾಮರು ಕೊಚ್ಚಿ ಹೋಗಬಹುದೇ? ಎನ್ನುವ ಪ್ರಶ್ನೆಗಳು ಕೇಳಿಬರಲಾರಂಭಿಸಿದೆ. ಈ ಬಗ್ಗೆ ಸ್ಥಳೀಯ ಶಾಸಕರು ಮತ್ತು ಅಧಿಕಾರಿಗಳು ಗಮನ ಹರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
Related Articles
ಈ ರಸ್ತೆ ತೀರಾ ಇಕ್ಕಟ್ಟಾಗಿರು ವುದರಿಂದಾಗಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಕಾಮಗಾರಿ ನಡೆಯುತ್ತಿದ್ದಂತೆಯೇ ವಾಹನಗಳು ಓಡಾಡುತ್ತಿದ್ದು, ಇಲ್ಲಿ ಇದೊಂದು ಸಮಸ್ಯೆ ಇದೆ. ಹೀಗಾಗಿ ಡಾಮರು ಕಿತ್ತು ಹೋಗಿರಬಹುದು. ಅದಾಗ್ಯೂ ಕಳಪೆ ಆಗಿದ್ದಲ್ಲಿ ಪರಿಶೀಲನೆ ನಡೆಸಿ ಸರಿಪಡಿಸಲು ಸೂಚಿಸುತ್ತೇನೆ.
- ಸಂದೀಪ್
ಜಿ.ಪಂ. ಎಂಜಿನಿಯರ್
Advertisement