Advertisement

ಉಪ್ಪಿನಂಗಡಿ: ರಿಕ್ಷಾ ನಿಲ್ದಾಣ ಸಮಸ್ಯೆ ಪರಿಹಾರಕ್ಕೆ ಶಾಸಕರಿಂದ ಭರವಸೆ

04:00 PM Feb 23, 2017 | |

ಉಪ್ಪಿನಂಗಡಿ : ಇಲ್ಲಿನ ಹೊಸ ಬಸ್‌ ನಿಲ್ದಾಣದ ಬಳಿಯ ಆಟೋ ರಿಕ್ಷಾನಿಲ್ದಾಣದ ಅಭಿವೃದ್ಧಿಗೆ ಅನುದಾನ ಮಂಜೂರಾಗಿದೆ. ಆದರೆ ರಿಕ್ಷಾ ನಿಲ್ದಾಣ ಲೋಕೋಪಯೋಗಿ ಇಲಾಖೆಯ ಜಾಗದಲ್ಲಿ ಬರುವುದರಿಂದ ಅಭಿವೃದ್ಧಿಗೆ ತೊಡಕಾಗಿತ್ತು. ಈ ಹಿನ್ನೆಲೆಯಲ್ಲಿ ರಿಕ್ಷಾ ನಿಲ್ದಾಣಕ್ಕೆ ಆಗಮಿಸಿ ರಿಕ್ಷಾಚಾಲಕ-ಮಾಲಕರ ಮನವಿ ಆಲಿಸಿದ ಶಾಸಕ ಕೆ. ವಸಂತ ಬಂಗೇರ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದಾರೆ.

Advertisement

ಹೊಸ ಬಸ್‌ ನಿಲ್ದಾಣದ ಬಳಿಯ ಉಪ್ಪಿನಂಗಡಿ-ಗುರುವಾಯನಕೆರೆ ರಾಜ್ಯ ಹೆದ್ದಾರಿ ಬದಿಯಲ್ಲಿರುವ ಆಟೋ ರಿಕ್ಷಾ ನಿಲ್ದಾಣದ ಅಭಿವೃದ್ಧಿಗೆ ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಅವರು ಮೂರು ಲಕ್ಷ ರೂಪಾಯಿ ಅನುದಾನ ನೀಡಿದ್ದರು. ಇದರಲ್ಲಿ ಇಂಟರ್‌ಲಾಕ್‌ ಹಾಗೂ ಮೇಲ್ಛಾವಣಿ ಅಳವಡಿಸಲು ತೀರ್ಮಾನಿಸಲಾಗಿತ್ತು. ಆದರೆ ಆಟೋ ನಿಲ್ದಾಣವಿರುವ ಜಾಗ ಲೋಕೋಪಯೋಗಿ ಇಲಾಖೆಗೆ ಸೇರುವುದರಿಂದ ಇಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸಲು ಇಲಾಖೆ ಅಡ್ಡಿಪಡಿಸಿತ್ತು. ಈ ಹಿನ್ನೆಲೆಯಲ್ಲಿ ರಿಕ್ಷಾ ಚಾಲಕರ ನಿಯೋಗ ಶಾಸಕ ಕೆ. ವಸಂತ ಬಂಗೇರ ಅವರನ್ನು ಭೇಟಿಯಾಗಿ ಸಮಸ್ಯೆ ಪರಿಹರಿಸಿಕೊಡುವಂತೆ ಮನವಿ ಮಾಡಿದ್ದರು. ಅದರಂತೆ ಉಪ್ಪಿನಂಗಡಿಯ ಆಟೋ ರಿಕ್ಷಾ ನಿಲ್ದಾಣಕ್ಕೆ ಆಗಮಿಸಿದ ವಸಂತ ಬಂಗೇರ ಅಧಿಕಾರಿಗಳೊಂದಿಗೆ ಮಾತನಾಡಿ, ಸಮಸ್ಯೆ ಪರಿಹರಿಸಿಕೊಡುವ ಭರವಸೆ ನೀಡಿದರು.

ಕೆಪಿಸಿಸಿ ಕಾರ್ಮಿಕ ಘಟಕದ ಉಪಾಧ್ಯಕ್ಷ ನಝೀರ್‌ ಮಠ, ರಿಕ್ಷಾ ಚಾಲಕ-ಮಾಲಕ ಸಂಘದ ಪದಾಧಿಕಾರಿಗಳಾದ ಬಶೀರ್‌ ಎಂ., ವಿಶ್ವನಾಥ ಬಂಗಾರಿ, ಅಬ್ಟಾಸ್‌ ಮಠ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next