Advertisement

Uppinangady: ಮಕ್ಕಳಿಗೆ ಚರಂಡಿ ಕೊಳಚೆಯಿಂದ ಮುಕ್ತಿ ಎಂದು?

01:02 PM Nov 19, 2024 | Team Udayavani |

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75 ರ ಸಮೀಪದ ಶತಮಾನದ ಇತಿಹಾಸವನ್ನು ಹೊಂದಿರುವ ಉಪ್ಪಿನಂಗಡಿ ಸರಕಾರಿ ಮಾದರಿ ಶಾಲಾ ವಠಾರದ ಪಕ್ಕದಲ್ಲಿರುವ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆಗೊಂಡು ಸಹಿಸಲಸಾಧ್ಯವಾದ ದುರ್ನಾತ ಬೀರುತ್ತಿದೆ. ಚರಂಡಿಯಲ್ಲಿ ಕೊಳಚೆ ನೀರು ಸರಾಗವಾಗಿ ಹರಿದು ಹೋಗದೆ ಅಲ್ಲಿಲ್ಲಿ ಕೊಳಚೆ ನೀರು ನಿಂತಿರುವುದರಿಂದ ಸೊಳ್ಳೆಗಳು ಭಾರೀ ಪ್ರಮಾಣದಲ್ಲಿ ಉತ್ಪಾದನೆಯಾಗಿದ್ದು ಸಾಂಕ್ರಮಿಕ ರೋಗಕ್ಕೆ ಕಾರಣವಾಗಿದೆ. ಇದರಿಂದಾಗಿ ಮಕ್ಕಳು ಪದೇಪದೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ಪೋಷಕರು ಆಂತಕ ವ್ಯಕ್ತಪಡಿಸುತ್ತಿದ್ದಾರೆ.

Advertisement

ಈ ಮೊದಲು ಚರಂಡಿ ನೀರು ಸರಾಗವಾಗಿ ಹರಿದು ಹೊಗುತ್ತಿದ್ದು, ಇಲ್ಲಿನ ಹೆದ್ದಾರಿ ಚತುಷ್ಪಥ ರಸ್ತೆ ವಿಸ್ತರಣೆ ಕಾಮಗಾರಿಯ ಸಂದರ್ಭದಲ್ಲಿ ಚರಂಡಿಗೆ ತಡೆಯಾದ್ದರಿಂದ ಸದ್ಯಕ್ಕೆ ನೀರು ಹರಿದು ಹೋಗದೆ ಶೇಖರಣೆಗೊಳ್ಳುತ್ತಿದೆ. ಪಟ್ಟಣದ ವಾಣಿಜ್ಯ ಕಟ್ಟಡಗಳಲ್ಲಿನ ಮಲಿನ ತ್ಯಾಜ್ಯ ನೀರು ಈ ಚರಂಡಿ ಮೂಲಕ ಹರಿದು ಶಾಲಾ ವಠಾರದಲ್ಲಿ ಹಾದು ಹೋಗುವ ಬದಲು ಒಂದೆಡೆ ಶೇಖರಣೆಗೊಂಡು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.

ಇಲ್ಲಿನ ಸಮಸ್ಯೆಯ ಬಗ್ಗೆ ಉಪ್ಪಿನಂಗಡಿ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿಯೂ ಸದಸ್ಯರು ವಿಷಯ ಪ್ರಸ್ತಾವಿಸಿದ್ದರೂ ಏನೂ ಈ ವರೆಗೆ ಪ್ರಯೋಜನ ಆಗಿಲ್ಲ. ಅದಾದ ಬಳಿಕ ಶಾಲಾಭಿವೃದ್ಧಿ ಸಮಿತಿ ನಿಯೋಗ ಪುತ್ತೂರು ಸಹಾಯಕ ಕಮಿಷನರ್‌ ಬಳಿ ತೆರಳಿ ಮನವಿ ನೀಡಿತ್ತು. ಆದರೂ ಸಮಸ್ಯೆಗೆ ಯಾವುದೇ ಪರಿಹಾರ ದೊರೆತಿಲ್ಲ.

ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳ ಸಂಖ್ಯೆ ಹೆಚ್ಚಾಗಿದ್ದು, ಆದಷ್ಟು ಬೇಗ ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಗಮನ ಹರಿಸಿ ಕೊಳಚೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪೋಷಕರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next