Advertisement

Uppinangady; ಆಟೋ ರಿಕ್ಷಾ ಪಲ್ಟಿ: ವಿದ್ಯಾರ್ಥಿಗಳು ಪಾರು

12:13 AM Sep 12, 2023 | Team Udayavani |

ಉಪ್ಪಿನಂಗಡಿ: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾವೊಂದು ಮಗುಚಿ ಬಿದ್ದು 9 ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಬೆಳ್ತಂಗಡಿ ತಾಲೂಕಿನ ಮೂರುಗೋಳಿ ಬಳಿ ಸೆ. 11ರಂದು ಬೆಳಗ್ಗೆ ಸಂಭವಿಸಿದೆ.

Advertisement

ಕಲ್ಲೇರಿ ಆಸುಪಾಸಿನಿಂದ ಮೂಡಡ್ಕದ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ಆಟೋ ರಿಕ್ಷಾಕ್ಕೆ ಮೂರುಗೋಳಿ ಬಳಿ ದ್ವಿಚಕ್ರ ವಾಹನವೊಂದು ಅಡ್ಡ ಬಂದಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ಕಳೆದುಕೊಂಡ ಆಟೋ ರಿಕ್ಷಾ ಮಗುಚಿ ಬಿದ್ದಿದೆ.

ಗಾಯಾಳು ಮಕ್ಕಳಿಗೆ ಉಪ್ಪಿನಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next