Advertisement

Uppinangady : ಅಪರಿಚಿತ ವ್ಯಕ್ತಿಯ ಶವ ಪತ್ತೆ

01:02 AM Mar 14, 2024 | Team Udayavani |

ಉಪ್ಪಿನಂಗಡಿ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಣಾಜೆ ಗ್ರಾಮದ ಉದನೆ ಎಂಬಲ್ಲಿನ ಗುಂಡ್ಯ ಹೊಳೆಯಲ್ಲಿ ಅಪರಿಚಿತ ಗಂಡಸಿನ ಮೃತ ದೇಹವೊಂದು ಬುಧವಾರ ಪತ್ತೆಯಾಗಿದೆ.

Advertisement

ಗುಂಡ್ಯ ಹೊಳೆಯ ಉರುವಲ್ತಾಯಕಯದಲ್ಲಿ ಸುಮಾರು 40ರಿಂದ 50ರ ಹರೆಯದ ವ್ಯಕ್ತಿಯದ್ದೆನ್ನಲಾದ ಶವವು ಹೊಳೆಯ ಗಿಡಗಂಟಿಗಳ ಮಧ್ಯೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಪ್ರಕರಣದ ಬಗ್ಗೆ ಕೊಣಾಜೆ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಪದ್ಮನಾಭ ಪಿ. ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next