Advertisement

Uppinangady ಸೈಕಲ್‌ ರಿಪೇರಿ ಮಾಡಿಸಿ ಕೊಡದ್ದಕ್ಕೆ ಬಾಲಕ ಆತ್ಮಹತ್ಯೆ

01:07 AM Apr 21, 2024 | Team Udayavani |

ಉಪ್ಪಿನಂಗಡಿ: ಇಲ್ಲಿನ ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್‌ (13) ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.

Advertisement

ಪಂಜದ ದಿ| ರೋಹಿತ್‌ ಗೌಡ ಅವರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ಅನಂತರ ದುಗಲಾಡಿಯ ಮಾವನ ಮನೆಯಲ್ಲಿದ್ದ. ಶುಕ್ರವಾರ ನಾಲ್ವರು ಗೆಳೆಯರೊಂದಿಗೆ ಆಟವಾಡುತ್ತಿದ್ದ ಈತ ತನ್ನ ಕೆಟ್ಟು ಹೋಗಿದ್ದ ಸೈಕಲ್‌ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದ. ಮನೆಯ ಇನ್ವರ್ಟರ್‌ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್‌ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ತಿಳಿಸಿದ್ದರು. ಇದರಿಂದ ನೊಂದ ಆತ ಮನೆಯ ಕೋಣೆಯೊಳಗೆ ಹೋಗಿ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿದ್ದಾಗಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next