Advertisement

Uppinangady ಗಾಂಜಾ ಸೇವನೆ; ಆರೋಪಿ ಸೆರೆ

10:07 PM Sep 16, 2023 | Team Udayavani |

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ 34ನೇ ನೆಕ್ಕಿಲಾಡಿಯ ಬಸ್‌ ತಂಗುದಾಣದ ಬಳಿ ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕವಾಗಿ ಅನುಚಿತವಾಗಿ ವರ್ತಿಸುತ್ತಿದ್ದ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ನಿವಾಸಿ ವೆಂಕಟೇಶ್‌ (32) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಅನುಚಿತ ವರ್ತನೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ವಿಚಾರಿಸಿದಾಗ ಗಾಂಜಾ ಸೇವಿಸಿರುವುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next