Advertisement

Uppinangady: ಕಾರು-ಬೈಕ್‌ ಢಿಕ್ಕಿ: ಸವಾರರು ಗಂಭೀರ

12:48 AM Oct 03, 2024 | Team Udayavani |

ಉಪ್ಪಿನಂಗಡಿ: ಕಾರು ಹಾಗೂ ಬೈಕ್‌ ಮುಖಾಮುಖಿ ಢಿಕ್ಕಿಯಾಗಿ ಬೈಕ್‌ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ-ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಕರಾಯದ ಭಾರತ್‌ ಪೆಟ್ರೋಲ್‌ ಬಂಕ್‌ ಮುಂಭಾಗದಲ್ಲಿ ಅ. 1ರಂದು ಸಂಜೆ ನಡೆದಿದೆ.

Advertisement

ಅನ್ಸಾರ್‌ ಹಾಗೂ ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರು ಕಾರಿಂಜಕಟ್ಟೆ ನಿವಾಸಿಗಳು ಎನ್ನಲಾಗಿದೆ. ಇವರು ಬೈಕ್‌ನಲ್ಲಿ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಎದುರಿನಿಂದ ಕಲ್ಲೇರಿ ಕಡೆಗೆ ಸಾಗುತ್ತಿದ್ದ ಇನ್ನೋವಾ ಕಾರು ಮತ್ತೊಂದು ದಿಕ್ಕಿನಲ್ಲಿರುವ ಪೆಟ್ರೋಲ್‌ ಬಂಕ್‌ಗೆಂದು ಬಲಬದಿಗೆ ತಿರುಗಿಸಿದ್ದು, ಈ ಸಂದರ್ಭ ಎದುರಿನಿಂದ ವೇಗವಾಗಿ ಬರುತ್ತಿದ್ದ ಬೈಕ್‌ ಕಾರಿನ ಮುಂಭಾಗಕ್ಕೆ ಢಿಕ್ಕಿ ಹೊಡೆದಿದೆ.

ಘಟನೆಯಿಂದ ಬೈಕ್‌ ಸವಾರರು ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಅನ್ಸಾರ್‌ ಅವರ ಕಾಲು ಮುರಿತಕ್ಕೊಳಗಾಗಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂ¤ರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next