Advertisement

ಉಪ್ಪಿನಂಗಡಿ ಪಂಜಾಳದಲ್ಲಿ 50 ಅಡಿ ಕಂದಕಕ್ಕೆ ಉರುಳಿದ ಕಾರು: ಮಕ್ಕಳಿಗೆ ಸಣ್ಣಪುಟ್ಟ ಗಾಯ

11:27 AM Mar 20, 2020 | keerthan |

ಉಪ್ಪಿನಂಗಡಿ: ಬೆಂಗಳೂರಿನಿಂದ ಉಡುಪಿ ಸಮೀಪದ ಶಿರ್ವಕ್ಕೆ ಬರುತ್ತಿದ್ದ ಕಾರು ಇಲ್ಲಿನ ಪಂಜಾಳ ಸಮೀಪ 50 ಅಡಿ ಆಳದ ಕಂದಕ್ಕೆ ಉರುಳಿ ಬಿದ್ದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

Advertisement

ಉಡುಪಿ ಶಿರ್ವದ ನವೀನ್ ಮತ್ತು ಕುಟುಂಬ ಬೆಂಗಳೂರಿನಿಂದ ಊರಿಗೆ ಹೊರಟಿತ್ತು. ಬೆಳಿಗ್ಗೆ 8 ಗಂಟೆ ಸುಮಾರಿಗೆ ಅವಗಢ ನಡೆದಿದ್ದು, ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ.

ಶಿರ್ವ ಮೂಲದ ನವೀನ್, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಕಾರಿನಲ್ಲಿದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸ್ಥಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next