Advertisement

ಮನೆಗೆ ಬಿದ್ದ ಬೆಂಕಿ ನಂದಿಸಲು ಹೋಗಿದ್ದಾತ ಚಿನ್ನಾಭರಣ ಎಗರಿಸಿದ್ದ

11:15 PM Jun 08, 2022 | Team Udayavani |

ಉಪ್ಪಿನಂಗಡಿ : ಕಳೆದ ಮೇ 16ರಂದು ಮನೆಗೆ ಬೆಂಕಿ ಬಿದ್ದ ಪ್ರಕರಣದಲ್ಲಿ ಮನೆಯ ಕಪಾಟಿನಲ್ಲಿದ್ದ 2.50 ಲಕ್ಷರೂ ಮೊತ್ತದ ಚಿನ್ನಾಭರಣ ಕಳವಿಗೀಡಾದ ಕೃತ್ಯಕ್ಕೆ ಸಂಬಂಧಿಸಿ ಕಳವು ನಡೆಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

Advertisement

ಬೆಳ್ತಂಗಡಿ ತಾ| ಕಣಿಯೂರು ಗ್ರಾಮದ ಮಲೆಂಗಲ್‌ನ ಆನಂದ ಮೂಲ್ಯ ಅವರ ಮನೆಗೆ ಬೆಂಕಿ ತಗಲಿದ್ದು, ಸ್ಥಳೀಯರು ಸಕಾಲಿಕ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದರು. ಆದರೆ ಆ ವೇಳೆಗಾಗಲೇ ಮನೆಯಲ್ಲಿದ್ದ ಬಟ್ಟೆ ಬರೆ, ಕೆಮರಾದ ಪರಿಕರಗಳು ಸುಟ್ಟು ಹೋಗಿದ್ದು, ಕಪಾಟಿನಲ್ಲಿದ್ದ ಚಿನ್ನ ಇಡುವ ಬಾಕ್ಸ್‌ ಮತ್ತು ದಾಖಲೆ ಪತ್ರಗಳು ಯಥಾ ಸ್ಥಿತಿಯಲ್ಲಿದ್ದವು. ಅನಂತರ ವಸ್ತುಗಳನ್ನು ಒಪ್ಪವಾಗಿ ಜೋಡಿಸಿ ಇಡುವಾಗ ಚಿನ್ನ ಇಡುವ ಬಾಕ್ಸ್‌ನೊಳಗಿದ್ದ ವಿವಿಧ ಆಭರಣಗಳು ಸೇರಿದಂತೆ ಒಟ್ಟು 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವು ಕಳವಾಗಿರುವುದು ಕಂಡುಬಂದಿತ್ತು.

ತನಿಖೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಸ್ಥಳೀಯ ಬಾರ್‌ ಉದ್ಯೋಗಿ ಶಿವಪ್ರಸಾದ್‌ (38) ನನ್ನು ವಿಚಾರಣೆ ನಡೆಸಿದಾಗ, ತಾನು ಚಿನ್ನಾಭರಣವನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದ. ಪೊಲೀಸರು ಆಭರಣಗಳನ್ನು ವಶಪಡಿಸಿ ಕೊಂಡಿದ್ದಾರೆ.

ಬೆಂಕಿ ನಂದಿಸಲು ಬಂದಾಗ ಮನೆಯೊಳಗೆ ಚಿನ್ನಾಭರಣದ ಪೆಟ್ಟಿಗೆ ನೋಡಿ ಅದನ್ನು ಎಗರಿಸಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next