Advertisement

Uppinangady;ರೆಖ್ಯ ಸೇತುವೆ ಕಾಮಗಾರಿ ವೇಳೆ ಅವಘಡ: ಹಲಗೆ, ಕಬ್ಬಿಣದ ಸರಳು ಕುಸಿತ

11:48 PM May 30, 2024 | Team Udayavani |

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ವಿಸ್ತರಣೆಯ ಸೇತುವೆ ಕಾಮಗಾರಿ ವೇಳೆ ಕಾಂಕ್ರೀಟ್‌ ಭಾರ ತಾಳಲಾರದೇ ಜೋಡಿಸಲ್ಪಟ್ಟ ಕಬ್ಬಿಣದ ಸರಳು ಸಹಿತ ಹಲಗೆ ಕುಸಿದು ಬಿದ್ದ ಘಟನೆ ರೆಖ್ಯ ಗ್ರಾಮದ ಪರಕ್ಕಳದಲ್ಲಿ ಬುಧವಾರ ಸಂಭವಿಸಿದೆ.

Advertisement

ಅಡ್ಡಹೊಳೆ- ಬಿ.ಸಿ.ರೋಡ್‌ ನಡುವೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು ರೆಖ್ಯ ಗ್ರಾಮದ ಪರಕ್ಕಳದಲ್ಲಿ ತೋಡಿಗೆ ಹೊಸ ಸೇತುವೆ ನಿರ್ಮಾಣ ನಡೆಯುತ್ತಿದೆ. ಪಿಲ್ಲರ್‌ ಕಾಮಗಾರಿ ಮುಗಿದಿದ್ದು ಅದರ ಮೇಲೆ ಹಲಗೆ, ಕಬ್ಬಿಣದ ಸರಳು ಜೋಡಿಸಿ ಮೇ 29ರಂದು ಸಂಜೆ ಯಂತ್ರದ ಮೂಲಕ ಕಾಂಕ್ರಿಟ್‌ ತುಂಬಿಸಲಾಗುತ್ತಿತ್ತು. ಸುಮಾರು 10 ಮೀಟರ್‌ನಷ್ಟು ಕಾಂಕ್ರೀಟ್‌ ತುಂಬಿಸುತ್ತಿದ್ದಂತೆ ಭಾರ ತಾಳಲಾರದೇ ಜೋಡಿಸಿದ್ದ ಹಲಗೆ, ಕಬ್ಬಿಣದ ಸರಳಿನ ಜೊತೆಗೆ ಕಾಂಕ್ರಿಟ್‌ ತೋಡಿಗೆ ಕುಸಿದು ಬಿದ್ದಿದೆ.

ಇದರಿಂದಾಗಿ ಇಲ್ಲಿ ಕಾಮಗಾರಿ ಸ್ಥಗಿತಗೊಂಡಿದೆ. ಯಂತ್ರದ ಮೂಲಕ ಕಾಂಕ್ರಿಟ್‌ ಹಾಕುತ್ತಿದ್ದುದ್ದರಿಂದ ಯಾವುದೇ ಅನಾಹುತ ನಡೆದಿಲ್ಲ. ಇಲ್ಲಿ ಸಮರ್ಪಕವಾದ ಬೀಮ್‌ ಅಳವಡಿಸಿಲ್ಲ, ಕಳಪೆ ಕಾಮಗಾರಿಯಿಂದಾಗಿ ಅವಘಡ ಸಂಭವಿಸಿರಬಹುದು ಸಾರ್ವಜನಿಕರು ಆರೋಪಿಸಿದ್ದಾರೆ. ಇದರ ಪಕ್ಕದಲ್ಲೇ ಹೊಸ ಸೇತುವೆ ನಿರ್ಮಾಣಗೊಂಡಿದ್ದು ಕೆಲವು ದಿನಗಳಿಂದ ವಾಹನಗಳು ಸಂಚರಿಸುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next